Home_Page_Advt
Home_Page_Advt
Home_Page_Advt
Breaking News

ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಹಿಂ.ಜಾ.ವೇ ಕಾರ್ಯಕರ್ತ ಕಾರ್ತಿಕ್ ಮೇರ್ಲರವರ ಶವಯಾತ್ರೆ

ಪುತ್ತೂರು: ಸಂಪ್ಯದಲ್ಲಿ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಹಿಂದು ಜಾಗರಣಾ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮೇರ್ಲರವರ ಶವಯಾತ್ರೆ ಸೆ.4ರಂದು ಪುತ್ತೂರು ನಗರದಲ್ಲಿ ನಡೆಯಿತು.

ಕಲ್ಲೇಗದಿಂದ ಹೊರಟ ಅಂತಿಮ ಶವಯಾತ್ರೆಯು ಬೊಳುವಾರು, ದರ್ಬೆ ಮುಖ್ಯ ರಸ್ತೆಯ ಮೂಲಕ ಸಾಗಿ ಸಂಪ್ಯ ಮೇರ್ಲ ಮೃತರ ನಿವಾಸದ ತನಕ ನಡೆಯಿತು. ನೂರಾರು ಮಂದಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಶವಯಾತ್ರೆಯಲ್ಲಿ ಭಾಗವಹಿಸಿದ್ದರು. ಶವಯಾತ್ರೆ ಸಂದರ್ಭದಲ್ಲಿ ಜೋರಾಗಿ ಮಳೆ ಸುರಿದರೂ ಅದನ್ನು ಲೆಕ್ಕಿಸದೆ ನೆನೆಯುತ್ತಾ ಕಾರ್ಯಕರ್ತರು ಯಾತ್ರೆಯಲ್ಲಿ ಸಾಗಿದರು.


ಸಂಪ್ಯ ಠಾಣೆ ಎದುರು ಕಾರ್ತಿಕ್ ಮೇರ್ಲರವರಿಗೆ ಸಾರ್ವಜನಿಕರು ಅಂತಿಮ ಸಮನ ಸಲ್ಲಿಸಿದರು. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

 

ಶಾಸಕ ಸಂಜೀವ ಮಠಂದೂರು, ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ.ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಜರಂಗದಳ ಮುಖಂಡ ಮುರಳಿಕೃಷ್ಣ ಹಸಂತಡ್ಕ ,ಜಿ.ಪಂ‌‌ ಸದಸ್ಯ ರಾಧಾಕೃಷ್ಣ ಆಳ್ವ ಸಾಜ ಮತ್ತಿತರರು, ಹಿಂ.ಜಾ.ವೇ.ಕಾರ್ಯಕರ್ತರು ಸೇರಿದಂತೆ ನೂರಾರು ಮಂದಿ ಮೃತ ಕಾರ್ತಿಕ್ ರವರ ಮನೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

 

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.