HomePage_Banner
HomePage_Banner
HomePage_Banner

ನೆಲ್ಯಾಡಿ: 37ನೇ ವರ್ಷದ ಗಣೇಶೋತ್ಸವ

Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ-ಕೌಕ್ರಾಡಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೆಲ್ಯಾಡಿ-ಕೌಕ್ರಾಡಿ ಇದರ ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.2ರಂದು ನೆಲ್ಯಾಡಿ-ಕೌಕ್ರಾಡಿ ಶ್ರೀ ಶಬರೀಶ ಕಲಾಮಂದಿರದಲ್ಲಿ ನಡೆಯಿತು.

ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಸುರೇಶ್ ಮುಚ್ಚಿಂತ್ತಾಯ ಹಾಗೂ ನೆಲ್ಯಾಡಿ-ಹಾರ್ಪಳ ಶ್ರೀ ಶಾಸ್ತಾರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ ನೂಜಿನ್ನಾಯರ ಪೌರೋಹಿತ್ಯದಲ್ಲಿ ಶ್ರೀ ಗಣಪತಿ ದೇವರ ಪ್ರತಿಷ್ಠೆ, ಅಯ್ಯಪ್ಪ ಸ್ವಾಮಿ ದೇವರಿಗೆ ಸೀಯಾಳಾಭಿಷೇಕ, ಗಣಹೋಮ ನಡೆಯಿತು. ಮಧ್ಯಾಹ್ನ ಮಹಾರಂಗಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ನೆಲ್ಯಾಡಿ ಶ್ರೀ ಶಬರೀಶ ಯಕ್ಷಗಾನ ಕಲಾವೃಂದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ ನಡೆಯಿತು.

ಧರ್ಮಜಾಗೃತಿ ಸಭೆ:
ಬೆಳಿಗ್ಗೆ ಗಣೇಶೋತ್ಸವ ಸಮಿತಿ ಅಧ್ಯಕ್ಷ ರವಿಪ್ರಸಾದ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಧರ್ಮಜಾಗೃತಿ ಸಭೆ ನಡೆಯಿತು. ಬೆಂಗಳೂರು ಉಚ್ಚ ನ್ಯಾಯಾಲಯದ ವಕೀಲ ಅರುಣ್ ಶ್ಯಾಮ್ ಎಂ.,ರವರು ದಿಕ್ಸೂಚಿ ಭಾಷಣ ಮಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿಯವರು ಉದ್ಘಾಟಿಸಿದರು. ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯ ವೈದ್ಯ ಡಾ. ಮುರಳೀಧರ್, ಎಸ್.ಕೆ.ಡಿ.ಆರ್.ಡಿ.ಪಿ. ದ.ಕ. ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ನೆಲ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳಾದ ಸುಬ್ರಹ್ಮಣ್ಯ ಜಿ., ಚಂದ್ರಶೇಖರ ಬಾಣಜಾಲು, ಉದಯ ಕುಮಾರ್ ದೋಂತಿಲ, ಸುಧೀರ್ ಕುಮಾರ್ ಶೆಟ್ಟಿ, ಗುಣಶೇಖರ ಉಪಸ್ಥಿತರಿದ್ದರು. ಸುಧೀರ್ ಕುಮಾರ್ ಸ್ವಾಗತಿಸಿದರು, ಸುಬ್ರಹ್ಮಣ್ಯ ಜಿ. ವಂದಿಸಿದರು. ಉಪನ್ಯಾಸಕರಾದ ಗುಡ್ಡಪ್ಪ ಬಲ್ಯ, ರವೀಂದ್ರ ಟಿ. ನಿರೂಪಿಸಿದರು. ಸಂಜೆ ಶ್ರೀ ಮಹಾಗಣಪತಿ ದೇವರ ವಿಗ್ರಹದ ಶೋಭಾಯಾತ್ರೆಯೂ ವೈವಿಧ್ಯಮಯ ಸ್ಥಬ್ದಚಿತ್ರಗಳೊಂದಿಗೆ ನಡೆಯಿತು.

ಪಿ.ಎಸ್.ಯಡಪಡಿತ್ತಾಯರಿಗೆ ಹುಟ್ಟೂರ ಸನ್ಮಾನ
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ, ಕೌಕ್ರಾಡಿ ನಿವಾಸಿಯಾಗಿರುವ ಪ್ರೊ.ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯರವರಿಗೆ ಈ ಸಂದರ್ಭದಲ್ಲಿ ಹುಟ್ಟೂರ ಸನ್ಮಾನ ಮಾಡಲಾಯಿತು. ಶಾಲು, ಅಭಿನಂದನಾ ಪತ್ರ, ಬೆಳ್ಳಿ ದೀಪವನ್ನು ಕುಲಪತಿ ಸುಬ್ರಹ್ಮಣ್ಯ ಯಡಪಡಿತ್ತಾಯರಿಗೆ ನೀಡಿ ಸನ್ಮಾನಿಸಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.