ಸೆ.20ಕ್ಕೆ ಅಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಜಾಥಾ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಜಾಥಾ ಕಾರ್ಯಕ್ರಮ ಸೆ.20ರಂದು ಪುತ್ತೂರು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಉದ್ಘಾಟನೆಗೊಳ್ಳಲಿದೆ.

ಜಾಥವು ಸರಕಾರಿ ಸಾರ್ವಜನಿಕ ಆಸ್ಪತ್ರೆಯಿಂದ ಕೋರ್ಟು ರಸ್ತೆಯ ಮೂಲಕ ಸರಕಾರಿ ಬಸ್ ನಿಲ್ದಾಣದ ಬಳಿಯಿಂದ ಎಂ.ಟಿ.ರಸ್ತೆಯಾಗಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಸಮಾಪನಗೊಳ್ಳಲಿದೆ. ಶಾಸಕ ಸಂಜೀವ ಮಠಂದೂರು ಅವರು ಜಾಥವನ್ನು ಉದ್ಘಾಟಿಸಲಿದ್ದು, ಜಾಥದಲ್ಲಿ ಸಹಾಯಕ ಕಮೀಷನರ್ ಹೆಚ್.ಕೆ.ಕೃಷ್ಣಮೂರ್ತಿ, ತಹಶೀಲ್ದಾರ್ ಅನಂತಶಂಕರ್, ಪೌರಾಯುಕ್ತೆ ರೂಪಾ ಶೆಟ್ಟಿ, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಮತ್ತು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ವೈದ್ಯರು, ಸಿಬಂದಿ ವರ್ಗದವರು ಪಾಲ್ಗೊಳ್ಳಲಿದ್ದಾರೆ ಎಂದು ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಆಶಾ ಜ್ಯೋತಿ ಪುತ್ತೂರಾಯ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.