Home_Page_Advt
Home_Page_Advt
Home_Page_Advt

ಒಡಿಯೂರು ಸಂಸ್ಥಾನದಲ್ಲಿ ಶ್ರೀ ಲಲಿತ ಪಂಚಮಿ ಮಹೋತ್ಸವ, ಶ್ರೀ ಚಂಡಿಕಾಯಾಗ, ಶ್ರೀ ಹನುಮಗಂಗಾ ಪುಷ್ಕರಿಣಿ ಸಮರ್ಪಣೆ

ಮಕ್ಕಳನ್ನು ಸಂಸ್ಕೃತಿಯ ವಾರಸುದಾರರನ್ನಾಗಿ ಮಾಡಬೇಕು: ಒಡಿಯೂರು ಶ್ರೀ

ವಿಟ್ಲ: ಕಲೆಯ ಆರಾಧನೆ ದೇವಿಯ ಆರಾಧನೆಯಾಗಿದೆ. ನವರಾತ್ರಿಯಲ್ಲಿ ಇಚ್ಛಾಶಕ್ತಿ, ಜ್ಞಾನಶಕ್ತಿ, ಕ್ರೀಯಾಶಕ್ತಿ ಸಮ್ಮಿಲಿವಾಗುತ್ತದೆ. ನಮ್ಮ ಮಕ್ಕಳನ್ನು ಸಂಸ್ಕೃತಿಯ ವಾರಸುದಾರರನ್ನಾಗಿ ಮಾಡಬೇಕಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹೇಳಿದರು. ಅವರು ಅ.2ರಂದು ಒಡಿಯೂರು ಸಂಸ್ಥಾನದಲ್ಲಿ ನಡೆದ ಶ್ರೀ ಲಲಿತ ಪಂಚಮಿ ಮಹೋತ್ಸವ, ಶ್ರೀ ಚಂಡಿಕಾಯಾಗ, ಶ್ರೀ ಹನುಮಗಂಗಾ ಪುಷ್ಕರಿಣಿ ಸಮರ್ಪಣೆ ಕಾರ್ಯಕ್ರಮದ ಪ್ರಯುಕ್ತ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದರು.
ಕಲಾವಿದರನ್ನು ಒಟ್ಟಾಗಿಸಿದರೆ ಅದು ಒಂದೊಂದು ಮಣಿಯನ್ನು ದೇವರಿಗೆ ಸಮರ್ಪಿಸಿದ ಫಲವಾಗಿದೆ. ಕಷ್ಟ ಸುಖಗಳು ಜೀವನದಲ್ಲಿ ಸ್ವಾಭಾವಿಕವಾಗಿದೆ.
ಆಸೆಯ ತ್ಯಾಗವೇ ಆನಂದದ ಉಗಮವಾಗಿದೆ.ಹೊಂದಾಣಿಕೆಯ ಸೇವೆ ಕ್ಷೇತ್ರದಲ್ಲಿ ನಡೆಯುತ್ತಿದ್ದು, ಭಕ್ತರ ಸೇವೆ ಇಲ್ಲಿ ಸಂಪನ್ನವಾಗಿದೆ. ಸನಾತನ ಸಂಸ್ಕೃತಿಯನ್ನು ಉಳಿಸಿದಾಗ ನೂತನ ಸಂಸ್ಕೃತಿ ಬೆಳಗಬಹುದು. ಸಮಾಜದ ಋಣ ಸಂತನಿಗೂ ಇದ್ದು, ಅದು ಸಂತರ ಕರ್ತವ್ಯವೂ ಆಗಿದೆ ಎಂದು ಹೇಳಿದರು.

 


ಸಾಧ್ವಿ ಶ್ರೀ ಮಾತಾನಂದಮಯೀ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ವಿದುಷಿ ಸಾವಿತ್ರಿ ಈಶ್ವರ ಭಟ್ ಅಮೈ, ಚಿತ್ರನಟ, ರಂಗಭೂಮಿ ಕಲಾವಿದ ಕಾಸರಗೋಡು ಚಿನ್ನಾ, ತುಳು ನಾಟಕ ರಚನೆಗಾರ, ನಿರ್ದೇಶಕ, ನಿರ್ಮಾಪಕ ಕೃಷ್ಣ ಜಿ. ಮಂಜೇಶ್ವರ, ಚಿತ್ರಕಲಾ ಶಿಕ್ಷಕ ತಾರಾನಾಥ ಕೈರಂಗಳ, ಅಬ್ಬಕ್ಕ ಟಿ.ವಿ.ಯ ಆಡಳಿತ ನಿರ್ದೇಶಕ ಶಶಿಧರ ಪೊಯ್ಯತ್ತಬೈಲ್, ಯಕ್ಷಗಾನ ಹಾಸ್ಯ ಕಲಾವಿದ ಸೀತಾರಾಮಕುಮಾರ್ ಕಟೀಲುರವರಿಗೆ ಸ್ವಾಮೀಜಿಯವರು ಗುರುದೇವಾನುಗ್ರಹ ಪುರಸ್ಕಾರ ನೀಡಿ ಗೌರವಿಸಿದರು.ಚಿಕ್ಕಮಗಳೂರು ಬಸವನಹಳ್ಳಿ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ನಂದಿನಿ ಶೆಟ್ಟಿ, ಮುಂಬೈನ ಉದ್ಯಮಿ ವಾಮಯ್ಯ ಬಿ. ಶೆಟ್ಟಿ, ರೇವತಿ ವಾಮಯ್ಯ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀ ಹನುಮಗಂಗಾ ಪುಷ್ಕರಣಿಯ ಪ್ರಾಯೋಜಕರಾದ ಮುಂಬೈನ ಉದ್ಯಮಿ ವಾಮಯ್ಯ ಬಿ. ಶೆಟ್ಟಿ, ರೇವತಿ ವಾಮಯ್ಯ ಶೆಟ್ಟಿ ದಂಪತಿಗಳನ್ನು, ತಾಂತ್ರಿಕ ನಿರ್ವಹಣೆ ಮಾಡಿದ ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಅಶೋಕ್ ಕುಮಾರ್ ಎ. ರವರನ್ನು ಸ್ವಾಮೀಜಿಯವರು ಗೌರವಿಸಿದರು. ಸಾಯೀಶ್ವರಿ ಪಟ್ಲ, ಒಡಿಯೂರು ಶ್ರೀ ವಿ.ಸೌ.ಸ.ನಿ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕರಾದ ನಿತ್ಯಾನಂದ ಶೆಟ್ಟಿ ಮನವಳಿಕೆ, ಒಡಿಯೂರು ಜೈ ಗುರುದೇವಾ ಕಲಾಕೇಂದ್ರದ ಅಧ್ಯಕ್ಷರಾದ ಸುಬ್ರಹ್ಮಣ್ಯ ಟಿ., ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಬಂಟ್ವಾಳ ತಾ. ವಿಸ್ತರಣಾಧಿಕಾರಿ ಸದಾಶಿವ ಅಳಿಕೆ, ಒಡಿಯೂರು ಶ್ರೀ ಗುರುದೇವ ಪ್ರೌಢಶಾಲಾ ಮುಖ್ಯ ಶಿಕ್ಷಕ ಜಯಪ್ರಕಾಶ್ ಶೆಟ್ಟಿ, ಒಡಿಯೂರು ಶ್ರೀ ಗುರುದೇವ ಪ್ರೌಢಶಾಲಾ ಶಿಕ್ಷಕಿ ಸವಿತಾರವರು ಶ್ರೀ ಗುರುದೇವಾನುಗ್ರಹ ಪುರಸ್ಕೃತರ ಪರಿಚಯ ಓದಿದರು.ಪ್ರಮೀಳ ಬಾಕ್ರಬೈಲ್ ಹಾಗೂ ಶೋಭಾ ಬಾಕ್ರಬೈಲ್ ರವರಿಗೆ ನೆರೆ ಪರಿಹಾರ ವಿತರಿಸಲಾಯಿತು.ರೇಣುಕಾ ಎಸ್ ಶೆಟ್ಟಿ ಪ್ರಾರ್ಥಿಸಿ, ಯಶವಂತ ವಿಟ್ಲ ಸ್ವಾಗತಿಸಿದರು.ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕರಾದ ಗಣಪತಿ ಭಟ್ ಸೇರಾಜೆ ವಂದಿಸಿದರು.

ಧಾರ್ಮಿಕ ಕಾರ್ಯಕ್ರಮ..

ಬೆಳಿಗ್ಗೆ ಒಡಿಯೂರು ಶ್ರೀಗಳವರ ದಿವ್ಯ ಕಲ್ಪನಾಶಕ್ತಿಯ ಅನಾವರಣವಾಗಿ ಶ್ರೀ ಸಂಸ್ಥಾನದಲ್ಲಿ ನಿರ್ಮಾಣಗೊಂಡ ‘ಶ್ರೀಹನುಮಗಂಗಾ ಪುಷ್ಕರಿಣಿ ಲೋಕಾರ್ಪಣೆಗೊಳಿಸಲಾಯಿತು. ಮಧ್ಯಾಹ್ನ ಶ್ರೀ ಚಂಡಿಕಾ ಮಹಾಯಾಗದ ಪುರ್ಣಾಹುತಿ, ಮಹಾಪೂಜೆ, ಮಹಾಸಂತರ್ಪಣೆ, ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ‘ಚಂದ್ರಾವಳಿ ವಿಲಾಸ’ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ಸಂಜೆ ಸಾರ್ವಜನಿಕ ಶ್ರೀ ಸ್ವಯಂವರ ಪಾರ್ವತೀ ಪೂಜೆ, ಅಷ್ಟಾವಧಾನ ಸೇವೆ, ರಾತ್ರಿ ಭದ್ರಕಾಳಿಗೆ ವಿಶೇಷ ಪೂಜೆ ನಡೆಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

2 Comments

 1. Gangadhar gandhi

  ಮಾನ್ಯರೇ
  ಸುದ್ದಿಗಳು ಚೆನ್ನಾಗಿ ಮೂಡಿಬರುತ್ತಿವೆ. ಅಭಿನಂದನೆಗಳು.
  ತಮ್ಮ ಸುದ್ದಿಯಲ್ಲಿ ಬಳಸುವ ಅಕ್ಷರಗಳು ಕೊಂಚ ಬೋಲ್ಡ್ ಆಗಿದ್ದರೆ ಓದಲು ಚೆನ್ನಾಗಿರುತ್ತದೆ . ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೀರಿ ಎಂದು ನಂಬಿದ್ದೇವೆ.

  ಗಂಗಾಧರ್ ಗಾಂಧಿ

  Reply

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.