HomePage_Banner
HomePage_Banner
HomePage_Banner
HomePage_Banner

ಎಬಿವಿಪಿ ಕಾರ್ಯಕರ್ತರಿಗೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಎಬಿವಿಪಿ ಪುತ್ತೂರು ಘಟಕದಿಂದ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಎಬಿವಿಪಿಯ ಸಕ್ರೀಯ ಕಾರ್ಯಕರ್ತರಾಗಿರುವ ಮಂಗಳೂರು ಕಾಲೇಜಿನ ವಿದ್ಯಾರ್ಥಿ ಕೇರಳದ ಮೂಲದ ಪ್ರಣಮ್ ಅವರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಎಬಿವಿಪಿ ಪುತ್ತೂರು ಘಟಕದಿಂದ ಅ.14ರಂದು ವಿವೇಕಾನಂದ ಕಾಲೇಜು ರಸ್ತೆಯಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಪುತ್ತೂರು ಸಹಾಯಕ ಕಮೀಷನರ್‌ಗೆ ಮನವಿ ಮಾಡಲಾಯಿತು.

ಮಂಗಳೂರು ನಗರದ ಕಾರ್‌ಸ್ಟ್ರೀಟ್ ಕಾಲೇಜಿನ ವಿದ್ಯಾರ್ಥಿ ಪ್ರಣಮ್ ಅವರು ಎಬಿವಿಪಿಯ ಸಕ್ರೀಯ ಕಾರ್ಯಕರ್ತರಾಗಿದ್ದು, ಯಾವುದೇ ಅನ್ಯ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಸೈನಿಕನಾಗಬೇಕೆಂಬ ಕನಸನ್ನು ಹೊತ್ತ ಇವರು ಪ್ರತಿ ದಿನ ದೈಹಿಕ ಕಸರತ್ತು ನಡೆಸುತ್ತಿದ್ದರು. ಈ ಸಮಯವನ್ನು ಬಳಸಿಕೊಂಡು ದುಷ್ಕರ್ಮಿಗಳು ಯಾವುದೆ ಉದ್ದೇಶವಿಲ್ಲದೆ ಕೇವಲ ರಾಜಕೀಯ ಹಿನ್ನೆಲೆಯಲ್ಲಿ ಅಮಾಯಕ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ವೈಚಾರಿಕವಾಗಿ, ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನಮ್ಮ ಕಾರ್ಯಕರ್ತರನ್ನು ಎದುರಿಸಲಾಗದೆ ಈ ರೀತಿಯ ದೈಹಿಕ ಹಲ್ಲೆ ನಡೆಸಿ ನಮ್ಮ ಧ್ವನಿಯನ್ನು ಅಡಗಿಸಲು ಕೆಲವು ದುಷ್ಕರ್ಮಿ ಸಂಘಟನೆಯ ಪ್ರಯತ್ನ ನಡೆಸುತ್ತಿವೆ. ಆದರೆ ಎಬಿವಿಪಿ ಕಾರ್ಯಕರ್ತರು ವೈಚಾರಿಕವಾಗಿ ತತ್ವಸಿದ್ಧಾಂತಕ್ಕೆ ಬದ್ಧವಾಗಿದ್ದು ಈ ರೀತಿಯ ಹಲ್ಲೆಗಳಿಗೆ ಭಯಬೀಳುವುದಿಲ್ಲ. ದುಷ್ಕರ್ಮಿಗಳ ಕ್ರಿಯೆಗಳಿಗೆ ನಮ್ಮ ರಚನಾತ್ಮಕ ಕಾರ್ಯಗಳ ಮೂಲಕ ಪ್ರತಿಕ್ರಿಯೆ ನೀಡುತ್ತೇವೆ ಎಂದು  ಎಬಿವಿಪಿ ಕಾರ್ಯಕರ್ತರು ತಿಳಿಸಿದರು. ಜೊತೆಗೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ಮಂಗಳೂರು ವಿದ್ಯಾರ್ಥಿನಿ ಪ್ರಮುಖ್ ಮನೀಶಾ ಶೆಟ್ಟಿ ಮತ್ತು ವಿವೇಕಾನಂದ ಕಾನೂನು ಕಾಲೇಜಿನ ದೀಕ್ಷಿತ್ ಅವರು ಮಾತನಾಡಿದರು. ಎಬಿವಿಪಿ ನಗರ ಕಾರ್ಯದರ್ಶಿ ಚೇತನ್ ಪಂಜ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಬಿವಿಪಿ ಕಾರ್ಯಕರ್ತರಾದ ಮನೀಷ್ ಕುಲಾಲ್, ಹರ್ಷಿತ್, ಮಿತೇಶ್, ಶಶಾಂಕ್, ಕಿಶನ್ ಶೆಟ್ಟಿ, ದೀಕ್ಷನ್, ರಿತ್ವಿಕ್, ಗುರುಪ್ರಸಾದ್ ಸೇರಿದಂತೆ ಹಲವಾರು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು. ಪ್ರತಿಭಟನೆ ಬಳಿಕ ಸಹಾಯಕ ಕಮೀಷನರ್‌ಗೆ ಮನವಿ ನೀಡಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.