Home_Page_Advt
Home_Page_Advt
Home_Page_Advt

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಬಂಧಿತ ಪ್ರಭಾರ ಮುಖ್ಯಶಿಕ್ಷಕ ನಝೀರ್ ಗೆ ಜಾಮೀನು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪರೀಕ್ಷಾ ಶುಲ್ಕ ಪಾವತಿಸಲು ಬಂದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿದ್ದ ಅದೇ ಶಾಲೆಯ ಪ್ರಭಾರ ಮುಖ್ಯಶಿಕ್ಷಿಕ ನಝೀರ್ ಎಂಬವರಿಗೆ ಜಿಲ್ಲಾ ಐದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಅ.16ರಂದು ವಿದ್ಯಾರ್ಥಿನಿ ಮರುಪರೀಕ್ಷೆಯ ಶುಲ್ಕ ಪಾವತಿಸಲು ಶಾಲೆಗೆ ಬಂದ ಸಂದರ್ಭ ನಝೀರ್ ಅವರು ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಪ್ರಯತ್ನಿಸಿರುವುದಾಗಿ ಆರೋಪಿಸಿ ವಿದ್ಯಾರ್ಥಿನಿ ಸಂಪ್ಯ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಆರೋಪಿ ನಝೀರ್ ಸರಕಾರಿ ನೌಕರನಾಗಿದ್ದು, 70ಶೇ. ಅಂಗವೈಕಲ್ಯದಿಂದ ಕೂಡಿದ್ದಾರೆ. ಸರಕಾರಿ ಉದ್ಯೋಗಿ 48 ಗಂಟೆಗಳಿಗಿಂತ ಅಧಿಕ ಅವಧಿಗೆ ನ್ಯಾಯಾಂಗ ಬಂಧನಕ್ಕೆ ಒಳಗಾದರೆ ಸರಕಾರಿ ನಿಯಮಾಳಿಗಳಂತೆ ಆತ ಕೆಲಸ ಕಳೆದುಕೊಳ್ಳಬೇಕಾಗುತ್ತದೆ. ಮನೆಗೆ ಈತನ ಉದ್ಯೋಗವೇ ಆಧಾರವಾಗಿದೆ. ಸಂತ್ರಸ್ತೆ ವಿದ್ಯಾರ್ಥಿನಿಯ ದೂರು ಪೊಕ್ಸೋ ವ್ಯಾಪ್ತಿಗೆ ಒಳಪಡುವುದಿಲ್ಲ ಎಂಬುದಾಗಿ ಆರೋಪಿ ನಝೀರ್ ಪರ ವಕೀಲರ ವಾದ ಪುರಸ್ಕರಿಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಯನ್ನು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಆರೋಪಿಯ ಪರವಾಗಿ ನ್ಯಾಯವಾದಿಗಳಾದ ಬಿ.ನರಸಿಂಹ ಪ್ರಸಾದ್, ಮುರಳಿಕೃಷ್ಣ ಚಲ್ಲಂಗಾರು ಹಾಗೂ ಶ್ಯಾಮ್ ಶಾಂತಿಗೋಡುರವರು ವಾದಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.