ಗೋಳಿತ್ತಟ್ಟು: ಸಮುದಾಯದತ್ತ ಶಾಲೆ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ನೆಲ್ಯಾಡಿ: ಗೋಳಿತ್ತಟ್ಟು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20ನೇ ಸಾಲಿನ ಮೊದಲ ಹಂತದ ಸಮುದಾಯದತ್ತ ಶಾಲಾ ಕಾರ್ಯಕ್ರಮ ನಡೆಯಿತು.

ಎಸ್.ಡಿ.ಎಂ.ಸಿ. ಅಧ್ಯಕ್ಷ ಅಬ್ದುಲ್ ಬಶೀರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯ ಅಭಿವೃದ್ಧಿಯಲ್ಲಿ ಎಲ್ಲಾ ಪೋಷಕರು ಕೈ ಜೋಡಿಸಿದಾಗ ಶಾಲೆಯ ಸಂಪೂರ್ಣ ಅಭಿವೃದ್ಧಿ ಸಾಧ್ಯ ಎಂದರು. ಶಾಲಾ ಮುಖ್ಯಗುರು ಶೀನಪ್ಪ ನಾಯ್ಕರವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಕಲಿಕೆ ಹಾಗೂ ಸರ್ವತೋಮುಖ ಬೆಳವಣಿಗೆಯಲ್ಲಿ ಹೆತ್ತವರ ಪಾತ್ರ ಮಹತ್ತರವಾಗಿದ್ದು, ಈ ನಿಟ್ಟಿನಲ್ಲಿ ಪೋಷಕರು ಹೆಚ್ಚಿನ ಗಮನ ನೀಡಬೇಕೆಂದು ಹೇಳಿದರು.

ಕಾರ್ಯಕ್ರಮದ ವೀಕ್ಷಕ ಹಾಗೂ ಮಾರ್ಗದರ್ಶಕರಾಗಿ ಆಗಮಿಸಿದ ಕೊಣಾಲು ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ರಮಣಿಯವರು ವಿದ್ಯಾರ್ಥಿಗಳ ಕಲಿಕೆಯ ಕಡೆ ಪೋಷಕರು ಹೆಚ್ಚಿನ ಗಮನ ನೀಡುವುದರೊಂದಿಗೆ ಪೋಷಕರು ಪ್ರತೀ ದಿನವೂ ಮಕ್ಕಳ ಬಗ್ಗೆ ವೈಯಕ್ತಿಕ ಗಮನ ನೀಡಲು ಸಮಯ ಮೀಸಲಿಡಬೇಕೆಂದರು. ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಸದಸ್ಯರಾದ ಬೈಜು, ಸೀತಾರಾಮ್, ಜಯಶ್ರೀ, ರುಕ್ಯಾ, ಅಬ್ದುಲ್ ರಹಿಮಾನ್, ಜಯಂತಿ ತಿರ್ಲೆ, ಅರುಣಾ, ಜಯಂತಿ, ಅಸ್ಮಾ, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕರುಗಳು ವಿದ್ಯಾರ್ಥಿಗಳ ಕಲಿಕೆಯ ಪ್ರಗತಿಯ ಬಗ್ಗೆ ಪೋಷಕರೊಂದಿಗೆ ಚರ್ಚಿಸಿ ಸೂಕ್ತಮಾರ್ಗದರ್ಶನ ನೀಡಿದರು. ಶಾಲಾ ಸಹಶಿಕ್ಷಕಿ ಸೀಮಾ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.