Home_Page_Advt
Home_Page_Advt
Home_Page_Advt
Breaking News

ನ.22: ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೆಂಜಾಳ ಶಾಖಾ ನೂತನ ಕಚೇರಿ ಕಟ್ಟಡ ಉದ್ಘಾಟನೆ


ಕಡಬ: ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೆಂಜಾಳ ಶಾಖಾ ನೂತನ ಕಚೇರಿ ಕಟ್ಟಡ ಉದ್ಘಾಟನೆ ನ.22ರಂದು ಅಪರಾಹ್ನ ೩ಕ್ಕೆ ಕೆಂಜಾಳ ಶಾಖಾ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ವಾಲ್ತಾಜೆ, ಉಪಾಧ್ಯಕ್ಷ ಚೆನ್ನಕೇಶವ ಕೈಂತಿಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್ಯಣ್ಣ ಗೌಡ ನಡ್ತೋಟು ಹಾಗೂ ನಿರ್ದೇಶಕರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್‌ರವರು ಶಾಖಾ ಕಚೇರಿ ಕಟ್ಟಡ ಉದ್ಘಾಟಿಸಲಿದ್ದಾರೆ. ಬಳಿಕ ಸುಳ್ಯ ಶಾಸಕ ಎಸ್.ಅಂಗಾರರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳಿನ್‌ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ದ.ಕ.ಜಿಲ್ಲೆ ಸಹಕಾರ ಸಂಘಗಳ ಉಪ ನಿಬಂಧಕ ಪ್ರವೀಣ್ ಬಿ.ನಾಯಕ್, ಖ್ಯಾತ ವಾಸ್ತುಶಿಲ್ಪಿ ಎಸ್.ಎಂ.ಪ್ರಸಾದ್ ಮುನಿಯಂಗಳರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಕೆ.ಎಸ್.ದೇವರಾಜ್, ಕೊಂಬಾರು ಗ್ರಾ.ಪಂ.ಅಧ್ಯಕ್ಷ ಅಜಿತ್ ಎಸ್., ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ತಾ.ಪಂ.ಸದಸ್ಯೆ ಆಶಾ ಲಕ್ಷ್ಮಣ್, ಎಪಿಎಂಸಿ ಸದಸ್ಯ ಮೇದಪ್ಪ ಗೌಡ, ಕೆಂಜಾಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ ಗೌಡ ಕಾಪಾರು ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಸ್ಥಳದಾನಿ ತಿರುಮಲೇಶ್ವರಿ ಕೂತೂರುರವರಿಗೆ ಸನ್ಮಾನ, ಸಂಘದ ಮಾಜಿ ಅಧ್ಯಕ್ಷರು, ನಿರ್ದೇಶಕರುಗಳು ಮತ್ತು ನಿವೃತ್ತ ಸಿಬ್ಬಂದಿಗಳಿಗೆ ಗೌರವಾರ್ಪಣೆ ನಡೆಯಲಿದೆ. ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿರುವ ರಶ್ಮಿ ಜೆ.ಎಸ್., ನಿಶ್ಚಿತಾ, ವಿಜೇತ ಎ.ಎಸ್.,ರವರಿಗೆ ಅಭಿನಂದನಾ ಕಾರ್ಯಕ್ರಮವು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.