- ಸ್ಥಳೀಯ ಸಾರ್ವಜನಿಕರಿಂದ ವಿವಿಧ ಬೇಡಿಕೆಗಳ ಪರಿಹಾರ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ
ಪುತ್ತೂರು: ಬನ್ನೂರು ಆನೆಮಜಲಿನಲ್ಲಿ ರೂ. 50 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಲಿರುವ ನ್ಯಾಯಾಲಯ ಸಂಕೀರ್ಣ ಕಾಮಗಾರಿ ನಡೆಯುವ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ನ.22ರಂದು ಭೇಟಿ ನೀಡಿ ಅಲ್ಲಿನ ಸ್ಥಳೀಯ ಸಾರ್ವಜನಿಕರ ವಿವಿಧ ಬೇಡಿಕೆಗಳಿಗೆ ಸ್ಪಂಧಿಸಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ, ಅಂಗನವಾಡಿ ಸೂಕ್ತ ವ್ಯವಸ್ಥೆ ಮಾಡುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜೊತೆಗೆ ಅಲ್ಲಿರುವ ನಾಗ ರಕ್ತೇಶ್ವರಿ ಬನದಲ್ಲಿ ಪ್ರಶ್ನೆ ಚಿಂತನೆಯಲ್ಲಿ ಏನು ಕಂಡು ಬರುತ್ತದೆಯೋ ಅದರ ಬಳಿಕ ಪರಿಹಾರ ಕಾರ್ಯಕ್ಕೆ ಮುಂದಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ತಿಳಿಸಿದ ಅವರು ಒಟ್ಟು ಕಾಮಗಾರಿಯ ಕುರಿತು ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲ ಇಂಜಿನಿಯರ್ ರಾಜರಾಮ್ ಮತ್ತು ಇಂಜಿನಿಯರ್ ಪ್ರಮೋದ್ ಅವರಿಂದ ಮಾಹಿತಿ ಪಡೆದರು.
ಈ ಸಂದರ್ಭಧಲ್ಲಿ ಗುತ್ತಿಗೆದಾರರು, ನಗರಸಭಾ ಸದಸ್ಯರಾದ ಗೌರಿ ಬನ್ನೂರು, ಮೋಹಿನಿ ವಿಶ್ವನಾಥ ಗೌಡ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಸಭೆ ಮಾಜಿ ಉಪಾಧ್ಯಕ್ಷ ವಿಶ್ವನಾಥ ಗೌಡ, ಪೌರಾಯುಕ್ತೆ ರೂಪಾ ಶೆಟ್ಟಿ, ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ, ಉಪಾದ್ಯಕ್ಷ ಸುರೇಶ್ ರೈ ಪಡ್ಡಂಬೈಲು, ಕಾರ್ಯದರ್ಶಿ ಮಂಜುನಾಥ್, ಉಪತಹಶೀಲ್ದಾರ್, ಸಿಡಿಪಿಒ ಭಾರತಿ, ಸರ್ವೆ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.