HomePage_Banner
HomePage_Banner
HomePage_Banner

ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ನಿಧಿಕುಂಭ ಸ್ಥಾಪನೆ

Puttur_Advt_NewsUnder_1
Puttur_Advt_NewsUnder_1

ಚಿತ್ರ: ಸುಧಾಕರ್ ಕಾಣಿಯೂರು

  • ಊರಿನವರ ಸಹಕಾರದಿಂದ ಸುಂದರ ದೇವಾಲಯ ನಿರ್ಮಾಣವಾಗಲಿ- ಕಾಣಿಯೂರು ಶ್ರೀ

ಕಾಣಿಯೂರು: ಊರಿನ ದೇವಸ್ಥಾನಗಳು ಜೀರ್ಣೋದ್ಧಾರಗೊಂಡು ಸುಂದರ ದೇವಸ್ಥಾನವಾಗಿ ನಿರ್ಮಾಣಗೊಂಡರೆ ನಮ್ಮ ಜೀವನವು ಸುಂದರಗೊಂಡ ಹಾಗೆ. ಊರಿನ ಎಲ್ಲಾ ಜನತೆಯ ಸಹಕಾರದಿಂದ ದೇವಸ್ಥಾನವು ಅತೀ ಸುಂದರವಾಗಿ ನಿರ್ಮಾಣಗೊಳ್ಳಲಿ. ಈ ನಿಟ್ಟಿನಲ್ಲಿ ದೇವಸ್ಥಾನ ನಿರ್ಮಾಣವಾಗುವಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಕಾಣಿಯೂರು ಶ್ರೀ ಮಠದ ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿಯವರು ಹೇಳಿದರು.

ಅವರು ಬ್ರಹ್ಮಕಲಶೋತ್ಸವದ ಸಿದ್ದತೆಯಲ್ಲಿರುವ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಡಿ ೭ರಂದು ನಿಧಿಕುಂಭ ಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು. ಪುರೋಹಿತ್ ಸುಬ್ರಹ್ಮಣ್ಯ ಉಪಾಧ್ಯಾಯ ಬೊಬ್ಬೆಕೇರಿ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನದೊಂದಿಗೆ ನಿಧಿಕುಂಭ ಸ್ಥಾಪನೆ ನೆರವೇರಿಸಲಾಯಿತು. ಪ್ರಾರಂಭದಲ್ಲಿ ಭೂವರಾಹ ಹೋಮ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಣಿಯೂರು ಶ್ರೀ ಮಠದ ವ್ಯವಸ್ಥಾಪಕರಾದ ನಿರಂಜನ್ ಆಚಾರ್, ಕಾಣಿಯೂರು ಶ್ರೀ ಮಠದ ಅರ್ಚಕ ಬಾಲಕೃಷ್ಣ ಅಸ್ರಣ್ಣರವರು ಸೇರಿದಂತೆ ಹಲವಾರು ಭಕ್ತಾಧಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.