HomePage_Banner
HomePage_Banner
HomePage_Banner
HomePage_Banner

ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ – ಪುತ್ತೂರಿಂದ 2,500 ಮಂದಿ ನಿರೀಕ್ಷೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನವು ಡಿ. 13 ರಿಂದ 15 ರ ತನಕ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀ ಪಾದಂಗಳವರ ಅಧ್ಯಕ್ಷತೆಯಲ್ಲಿ ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಮಾವೇಶಗಳೊಂದಿಗೆ ನಡೆಯಲಿದೆ ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಪ್ರೊ. ಡಾ| ಪಿ. ಕೆ. ಬಾಲಕೃಷ್ಣ ಮೂಡಂಬಡಿತ್ತಾಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ತುಳು ವಿಶ್ವಬ್ರಾಹ್ಮಣರು ಒಟ್ಟು 25 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದಾರೆ. ಒಟ್ಟು ಸಮುದಾಯವನ್ನು ಒಗ್ಗೂಡಿಸಿ ಶಿವಳ್ಳಿ ಬ್ರಾಹ್ಮಣರ ವಿಶಿಷ್ಟ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಮತ್ತು ಪರ್ಯಾಯ ಪಲಿಮಾರು ಶ್ರೀ ವಿದ್ಯಾದೀಶ ಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಹಾಗೂ ಆಶೀರ್ವಚನದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಗೋಷ್ಠಿಗಳು ನಡೆಯಲಿದ್ದು, ಶಿವಳ್ಳಿ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರು ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ ಎಂದರು.

ಸಾಂಸ್ಕೃತಿಕ ಉದ್ಘಾಟನೆ
ಡಿ.೧೩ ರಂದು ಸಂಜೆ ಪಲಿಮಾರು ಮಠ ಶ್ರೀ ವಿದ್ಯಾದೀಶ ತೀರ್ಥ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ಭಿಮನಕಟ್ಟೆ ಶ್ರೀ ರಾಘವೇಂದ್ರತೀರ್ಥ ಸ್ವಾಮೀಜಿಯವರ ಆಶೀರ್ವಚನದೊಂದಿಗೆ ಉಡುಪಿಯ ಶಾಸಕ ರಘುಪತಿ ಭಟ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಸಮಾವೇಶ ಉದ್ಘಾಟನೆ
ಡಿ.14ರಂದು ಬೆಳಗ್ಗೆ ಉಡುಪಿ ಸಂಸ್ಕೃತ ಮಹಾಪಾಠ ಶಾಲೆಯಿಂದ ರಾಜಾಂಗಣದವರೆಗೆ ಮೆರವಣಿಗೆ ನಡೆಯಲಿದ್ದು, ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ಪರ್ಯಾಯ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಶಿವಳ್ಳಿ ಮಹಿಳೆಯರಿಂದ ಲಕ್ಷ್ಮೀಶೋಭಾನೆ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಸಮಾವೇಶದಲ್ಲಿ ಕೃಷ್ಣಾಪುರ ಮಠಾಧೀಶ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಕಟೀಲು ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಯಮಶೀಲತಾ ಸಮಾವೇಶದಲ್ಲಿ ಕಾಣಿಯೂರು ಮಠಾಧೀಶ ವಿದ್ಯಾವಲ್ಲಭತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ಮಂಜುನಾಥ ಉಪಾಧ್ಯಾಯ ಪರ್ಕಳ ಅಧ್ಯಕ್ಷತೆ ವಹಿಸಲಿದ್ದಾರೆ. ಶೈಕ್ಷಣಿಕ ಸಮಾವೇಶದಲ್ಲಿ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಪ್ರೊ| ಎಂ.ಬಿ. ಪುರಾಣಿಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಾಗೆಯೇ ತುಳು ಶಿವಳ್ಳಿ ಸಮಾಜ ಅಂದು -ಇಂದು -ಮುಂದು ಎಂಬ ವಿಚಾರಗೋಷ್ಠಿ. ಮಹಿಳಾ ಸಮಾವೇಶ, ಯುವ ವಿಭಾಗದ ಸಮಾವೇಶ, ಧಾರ್ಮಿಕ ಚಿಂತನ ಗೋಷ್ಠಿ, ಸಾಧಕರ ಸಮಾವೇಶ ಹಾಗೂ ಡಿ. ೧೫ ರಂದು ಸಂಜೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಶಿವಳ್ಳಿ ಸಮಾಜದ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ, ನಿಕಟಪೂರ್ವ ಅಧ್ಯಕ್ಷ ರಂಗನಾಥ್ ಉಂಗ್ರುಪುಳಿತ್ತಾಯ, ಸಮ್ಮೇಳನ ಸಮಿತಿ ತಾಲೂಕು ಸಂಚಾಲಕ ನ್ಯಾಯವಾದಿ ದಿವಾಕರ ನಿಡ್ವಣ್ಣಾಯ, ಯುವ ಸಂಪದದ ತಾಲೂಕು ಸಂಚಾಲಕ ಸುಧೀರ್‌ಕೃಷ್ಣ ಪಡ್ಡಿಲ್ಲಾಯ ಉಪಸ್ಥಿತರಿದ್ದರು.

ಪುತ್ತೂರಿನಿಂದ 2500 ಮಂದಿ
ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ಸುಮಾರು ನಾಲ್ಕೂವರೆಯಿಂದ ೫ಸಾವಿರ ಮಂದಿ ತುಳು ಶಿವಳ್ಳಿ ಬ್ರಾಹ್ಮಣರಿದ್ದು, ಈಗಾಗಲೆ ಸುಮಾರು ಒಂದೂವರೆ ಸಾವಿರ ಮಂದಿ ಸಮಾವೇಶದಲ್ಲಿ ಭಾಗವಹಿಸಲು ನೋಂದಾವಣೆ ಮಾಡಿಕೊಂಡಿದ್ದಾರೆ. ಒಟ್ಟು ಸುಮಾರು 2500 ಸಾವಿರ ಮಂದಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಸಮಾವೇಶದಲ್ಲಿ ದೇಶ -ವಿದೇಶಗಳಲ್ಲಿ ನೆಲೆಸಿರುವ ಶಿವಳ್ಳಿ ಸಮಾಜದ ಗಣ್ಯರು ಹಾಗೂ ಸಾಧಕರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪುತ್ತೂರು ತಾಲೂಕು ಶಿವಳ್ಳಿ ಸಮಾಜದ ಅಧ್ಯಕ್ಷ ಹರೀಶ್ ಪುತ್ತೂರಾಯ ಹೇಳಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.