ಪ್ರತಿಭಟನಕಾರರ ಒತ್ತಡಕ್ಕೆ ಮಣಿದು ಇಡ್ಯಡ್ಕ ಶಾಲಾ ಶಿಕ್ಷಕ ಜಯಂತ ಅಮಾನತು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಹಣದುರುಪಯೋಗ ಸೇರಿದಂತೆ ಇನ್ನಿತರ ಆರೋಪಗಳ ದೋಳ್ಪಾಡಿ ಶಾಲಾ ಸಹ ಶಿಕ್ಷಕ ಜಯಂತ ವೈ ವಿರುದ್ದ ಎಸ್‌ಡಿಎಂಸಿ ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಅಮಾನತುಗೊಳಿಸುವಂತೆ ಆಗ್ರಹಿಸಿದ್ದು ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿಯನ್ನು ಆಧರಿಸಿ ಶಿಕ್ಷಕ ಜಯಂತ ವೈಯವರುನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಇಡ್ಯಡ್ಕ ಶಾಲೆಯಲ್ಲಿ ಸಹ ಶಿಕ್ಷಕ, ಪ್ರಭಾರ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯಂತ ವೈಯವರು ನಿಯೋಜನೆಯಲ್ಲಿ ದೋಳ್ಪಾಡಿ ಗಾಣಂತಿ ಹಿ.ಪ್ರಾ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯನಿರ್ವಹಿಸುತ್ತಿದ್ದು ಇತ್ತೀಚೆಗೆ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಕಾಣಿಯೂರು ಗ್ರಾ.ಪಂ ಸದಸ್ಯ ಗಣೇಶ್ ಉದನಡ್ಕರವರಿಗೆ ಅಗೌರವ ತೋರಿದ್ದಾರೆ. ಅಲ್ಲದೆ ಶಾಲಾ ಎಸ್‌ಡಿಎಂಸಿ ಖಾತೆಯ ಹಣವನ್ನು ದುರುಪಯೋಗಪಡಿಸಿದ್ದಾರೆ ಎಂದು ಆರೋಪಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದರು. ಆದರೆ ನೀಡಿದ ದೂರಿಗೆ ಯಾವುದೇ ಸ್ಪಂಧನೆ ದೊರೆಯದಿರುವ ಹಿನ್ನೆಲೆಯಲ್ಲಿ ದ.9ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ ಎಸ್‌ಡಿಎಂಸಿ ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಕಛೇರಿಗೆ ಮುತ್ತಿಗೆ ಹಾಕಿದರು. ಸ್ಥಳಕ್ಕೆ ಉಪನಿರ್ದೇಶಕರು ಅಥವಾ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು. ಅವರು ಶಿಕ್ಷಕ ಜಯಂತರವರನ್ನು ಅಮಾನತುಗೊಳಿಸಬೇಕು ಎಂದು ಪಟ್ಟು ಹಿಡಿದು ಸಂಜೆ ತನಕ ಪ್ರತಿಭಟನೆ ನಡೆಸಿದರು. ಶಿಕ್ಷಕ ಜಯಂತ ವೈ ವಿರುದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿಯನ್ನು ಆಧರಿಸಿ ಆರೋಪದ ಗಂಭೀರತೆಯನ್ನು ಆಧರಿಸಿ ಜಿಲ್ಲಾ ಉಪನಿರ್ದೇಶಕರು ಶಿಕ್ಷಕ ಜಯಂತರವರನ್ನು ಮುಂದಿನ ಆದೇಶದ ತನಕ ಹುದ್ದೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.