ಸಿದ್ದರಾಮಯ್ಯ ಬಳಿಕ ದಿನೇಶ್ ಗುಂಡೂರಾವ್ ರಾಜೀನಾಮೆ

Puttur_Advt_NewsUnder_1
Puttur_Advt_NewsUnder_1
  • ಸೋಲಿನ ನೈತಿಕ ಹೊಣೆ ಹೊತ್ತ ಕೆಪಿಸಿಸಿ ಅಧ್ಯಕ್ಷ

ಬೆಂಗಳೂರು: ಸರಕಾರದ ಮಟ್ಟದಲ್ಲಿ ಮಹತ್ವದ ತಿರುವು ಎಂದೇ ಭಾವಿಸಲಾದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆ, ಸೋಲಿನ ನೈತಿಕ ಹೊಣೆ ಹೊತ್ತುಕೊಂಡ ಕಾಂಗ್ರೆಸ್ ನಾಯಕರು ರಾಜೀನಾಮೆ ಸಲ್ಲಿಸುತ್ತಿದ್ದಾರೆ. ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜೀನಾಮೆ ಘೋಷಿಸಿದ ಬೆನ್ನಿಗೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ಸಲ್ಲಿಸುವುದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಸಲ್ಲಿಸಿದ್ದೇನೆ. ಫಲಿತಾಂಶದ ಬಗ್ಗೆ ನಿನ್ನೆಯೇ ಸಂಶಯ ಇತ್ತು. ಆದ್ದರಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜತೆಗೆ ಮಾತನಾಡಿ, ಫಲಿತಾಂಶ ನಮ್ಮ ಪರವಾಗಿ ಬಾರದೇ ಇದ್ದರೆ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದೇ. ಅದೇ ರೀತಿ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ.

ಜನತಾ ನ್ಯಾಯಾಲಯ ಉತ್ತಮ ತೀರ್ಪು ನೀಡುತ್ತದೆ ಎಂದು ನಂಬಿದ್ದೆವು. ಪಕ್ಷ ಬಿಟ್ಟು, ಸರಕಾರ ಉರುಳಿಸಲು ಪ್ರಯತ್ನಿಸಿದವರ ವಿರುದ್ಧ ಜನರು ತೀರ್ಪು ನೀಡುತ್ತಾರೆ ಎಂದುಕೊಂಡಿದ್ದೆವು. ಜನರ ತೀರ್ಪಿನಿಂದ ನೋವಾಗಿದೆ ನಿಜ. ಆದರೆ ಜನರ ನೀಡಿದ ತೀರ್ಪನ್ನು ಗೌರವಿಸುತ್ತೇವೆ ಹಾಗೂ ಅದನ್ನು ಪಾಲಿಸುತ್ತೇವೆ. ಚುನಾವಣೆ ಬಳಿಕ ರಾಜ್ಯದ, ಜನರ ಹಿತವೇ ಮುಖ್ಯ. ಈ ನಿಟ್ಟಿನಲ್ಲಿ ಗೆದ್ದ ಎಲ್ಲರೂ ಶ್ರಮಿಸುತ್ತಾರೆ ಎಂದು ನಂಬಿದ್ದೇನೆ. ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್‌ನ ಇಬ್ಬರು ಅಭ್ಯರ್ಥಿಗಳ ಜತೆಗೆ ಪಕ್ಷೇತರ ಅಭ್ಯರ್ಥಿ, ಬಿಜೆಪಿಯ ೧೨ ಅಭ್ಯರ್ಥಿಗಳಿಗೆ ಶುಭಾಶಯ ಎಂದರು.

ಅಭ್ಯರ್ಥಿಗಳ ಆಯ್ಕೆ ಸಂದರ್ಭ ತಳಮಟ್ಟದಿಂದಲೇ ಅಭಿಪ್ರಾಯ ಪಡೆದುಕೊಂಡಿದ್ದೇವೆ. ಬಿರುಸಿನ ಪ್ರಚಾರದಲ್ಲೂ ಎಲ್ಲಾ ನಾಯಕರು ತಮ್ಮನ್ನು ಪರಿಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಆದರೂ ಫಲಿತಾಂಶ ಕಾಂಗ್ರೆಸ್ ಪರವಾಗಿ ಬಂದಿಲ್ಲ. ಆದರೆ ದೇಶದ ಹಿತದೃಷ್ಟಿಯಿಂದ ಕಾಂಗ್ರೆಸ್ ತೀರಾ ಅಗತ್ಯ. ಚುನಾವಣೆ ಯಾವ ರೀತಿಯಾಗಿ ನಡೆದಿದೆ ಎಂದು ನೋಡಿದ್ದೇವೆ. ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ಕಟ್ಟಲು ಎಲ್ಲಾ ರೀತಿಯಲ್ಲೂ ಶ್ರಮಿಸುತ್ತೇನೆ. ಕೆಪಿಸಿಸಿ ಅಧ್ಯಕ್ಷನಾಗಿಯೂ ಪ್ರಾಮಾಣಿಕವಾಗಿ ದುಡಿದಿದ್ದೇನೆ. ಹಲವು ಸಂಧಿಗ್ಧ ಪರಿಸ್ಥಿತಿಗಳನ್ನು ಎದುರಿಸಿದ್ದೇನೆ. ಶಾಂತಿಯ ವಾತಾವರಣವನ್ನೇ ಕಂಡಿಲ್ಲ ಎಂದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.