HomePage_Banner
HomePage_Banner
HomePage_Banner
HomePage_Banner

ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಸುದರ್ಶನ್ ಮೂಡಬಿದಿರೆ ಆಯ್ಕೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸುದರ್ಶನ್ ಮೂಡಬಿದಿರೆರವರು ಆಯ್ಕೆಯಾಗಿದ್ದಾರೆ.

ಮಂಗಳೂರಿನಲ್ಲಿರುವ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಜ.12ರಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸುದರ್ಶನ್‌ರವರ ಆಯ್ಕೆ ಅವಿರೋಧವಾಗಿ ನಡೆದಿದೆ. ಪ್ರಸ್ತುತ ಜಿಲ್ಲಾಧ್ಯಕ್ಷರಾಗಿರುವ ಪುತ್ತೂರು ಶಾಸಕ ಸಂಜೀವ ಮಠಂದೂರುರವರ ಜಿಲ್ಲಾಧ್ಯಕ್ಷತೆಯ ಅವಧಿ ೨೦೧೯ರ ಸೆಪ್ಟೆಂಬರ್ ತಿಂಗಳಿನಲ್ಲಿ ಮುಕ್ತಾಯಗೊಂಡಿದ್ದು ಇದೀಗ ನೂತನ ಅಧ್ಯಕ್ಷರ ಆಯ್ಕೆ ನಡೆದಿದೆ. ಅಧ್ಯಕ್ಷ ಸ್ಥಾನಕ್ಕೆ ಸುದರ್ಶನ್‌ರವರ ಹೆಸರನ್ನು ಪುತ್ತೂರು ಗ್ರಾಮಾಂತರ ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮತ್ತು ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್‌ರವರ ಸೂಚಿಸಿದ್ದು ಪುತ್ತೂರು ಶಾಸಕ ಸಂಜೀವ ಮಠಂದೂರು ಹಾಗೂ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿಯವರು ಅನುಮೋದಿಸಿದ್ದರು. ಸಂಘ ಪರಿವಾರದ ಹಿನ್ನೆಲೆಯುಳ್ಳ ಸುದರ್ಶನ್ ಮೂಡಬಿದ್ರೆರವರು ಪ್ರಸ್ತುತ ದ.ಕ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸುದರ್ಶನ್‌ರವರನ್ನು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಜಿಲ್ಲಾ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ನಗರ ಮಂಡಲ ಬಿಜೆಪಿಯ ಅಧ್ಯಕ್ಷರಾದ ನಗರಸಭಾ ಸದಸ್ಯ ಪಿ.ಜಿ. ಜಗನ್ನೀವಾಸ ರಾವ್‌ರವರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನರವರು ಚುನಾವಣಾ ವೀಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.