Home_Page_Advt
Home_Page_Advt
Home_Page_Advt

ಗೆಜ್ಜೆಗಿರಿ ನಂದನ ಬಿತ್ತ್‌ಲ್ ಕ್ಷೇತ್ರದ ಬ್ರಹ್ಮಕಲಶೋತ್ಸವ: ಪುತ್ತೂರು ತಾಲೂಕು ಸಮಿತಿಯ ಪೂರ್ವಭಾವಿ ಸಭೆ

ಪುತ್ತೂರು: ಗೆಜ್ಜೆಗಿರಿ ನಂದನ ಬಿತ್ತ್‌ಲ್ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಗೆಜ್ಜೆಗಿರಿ ಪುತ್ತೂರು ತಾಲೂಕು ಸಮಿತಿಯ ಸಭೆ ಶ್ರೀ ಕ್ಷೇತ್ರದಲ್ಲಿ ನಡೆಯಿತು.

ತಾಲೂಕು ಸಮಿತಿಯ ಅಧ್ಯಕ್ಷರಾದ ಕೆಡೆಂಜಿಗುತ್ತು ಪ್ರವೀಣ್ ಕುಮಾರ್ ಅಧ್ಯಕ್ಷ ಸ್ಥಾನದಿಂದ ಮಾತನಾಡಿ, ಬ್ರಹ್ಮಕಲಶೋತ್ಸವಕ್ಕೆ ಇನ್ನು ಕೇವಲ 40 ದಿನಗಳು ಮಾತ್ರ ಉಳಿದಿರುವ ಹಿನ್ನೆಲೆಯಲ್ಲಿ ಸಮಿತಿಯ ಸದಸ್ಯರ ಜವಾಬ್ದಾರಿ ಅಧಿಕವಿದೆ. ತಾಲೂಕು ಸಮಿತಿಯ ನೇತೃತ್ವದಲ್ಲಿ ಇಡೀ ಪುತ್ತೂರು ತಾಲೂಕಿನಲ್ಲಿ ವ್ಯವಸ್ಥಿತ ಪ್ರಚಾರ ಕಾರ್ಯ ನಡೆಸಬೇಕಾಗಿದೆ. ಇದಕ್ಕಾಗಿ ಮೊದಲ ಹಂತದಲ್ಲಿ ವಲಯಾವಾರು ಸಭೆ ನಡೆಸಲಾಗುವುದು. ಆಯಾ ವಲಯಗಳ ಗ್ರಾಮ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಬೇಕು. ಗ್ರಾಮ ಸಮಿತಿಗಳ ಮೂಲಕ ಎಲ್ಲ ಮನೆಗಳನ್ನು ತಲುಪಲಾಗುವುದು. ಈ ಸಂದರ್ಭ ಬ್ರಹ್ಮಕಲಶೋತ್ಸವ ಕಲಶ ಪತ್ರಗಳನ್ನು ಭಕ್ತರಿಗೆ ಮುಟ್ಟಿಸುವ ವ್ಯವಸ್ಥೆ ಮಾಡಲಾಗುವುದು ಎಂದರು. ಈಗಾಗಲೇ ತಾಲೂಕಿನಲ್ಲಿ ನಿಧಿ ಸಂಗ್ರಹ ಅಭಿಯಾನ ನಡೆಸಲಾಗಿದ್ದು, ಇದನ್ನು ಪರಿಪೂರ್ಣಗೊಳಿಸುವ ಕೆಲಸ ತಾಲೂಕು ಸಮಿತಿ ನೇತೃತ್ವದಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಫೆ.25ರಂದು ಕ್ಷೇತ್ರಕ್ಕೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಇದಕ್ಕಾಗಿ ಪ್ರತ್ಯೇಕ ತಾಲೂಕು ಸಂಚಾಲಕರು ಮತ್ತು ಗ್ರಾಮ ಸಮಿತಿಗಳನ್ನು ರಚಿಸಲಾಗಿದೆ. ತಾಲೂಕಿನ ಹೊರೆಕಾಣಿಕೆ ಮರವಣಿಗೆ ಅಂದು ಮಧ್ಯಾಹ್ನ 12 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆ ತಲುಪಲಿದೆ. ಅಲ್ಲಿಂದ ಎಲ್ಲಾ ತಾಲೂಕುಗಳ ಹೊರೆಕಾಣಿಕೆ ಸೇರಿಕೊಂಡು ಕ್ಷೇತ್ರಕ್ಕೆ ಚಾರಿತ್ರಿಕ ಮೆರವಣಿಗೆ ನಡೆಯಲಿದೆ ಎಂದು ಹೊರೆಕಾಣಿಕೆ ಸಮಿತಿಯ ಪ್ರಧಾನ ಸಂಚಾಲಕರಾದ ರವಿ ಕಕ್ಕೆಪದವು ಹೇಳಿದರು.

ಕ್ಷೇತ್ರದ ಯಜಮಾನರಾದ ಶ್ರೀಧರ ಪೂಜಾರಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ಜಯಂತ ನಡುಬೈಲ್, ಪ್ರ. ಕಾರ್ಯದರ್ಶಿ ರವಿ ಪೂಜಾರಿ ಚಿಲಿಂಬಿ, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ತಾಲೂಕು ಸಮಿತಿಯ ಪ್ರಧಾನ ಕಾರ್ಯದರ್ಶಿ ಶಶಿಧರ ಕಿನ್ನಿಮಜಲ್, ಹೊರೆಕಾಣಿಕೆ ಸಮಿತಿಯ ತಾಲೂಕು ಸಂಚಾಲಕ ದಯಾನಂದ ಆಲಂಕಾರ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ನಾರಾಯಣ ಪೂಜಾರಿ ಮಡ್ಯಂಗಳ, ಪ್ರಮುಖರಾದ ವಿನಯಾ ವಸಂತ್ ಬಲ್ನಾಡ್, ಸದಾನಂದ ಮಡ್ಯೊಟ್ಟು, ಚಂದ್ರಕಾಂತ ಶಾಂತಿವನ, ನಾಗೇಶ್ ಬಲ್ನಾಡ್, ಜಯಂತ ಬಾಯಾರ್, ಕೇಶವ ಬೆದ್ರಾಳ, ಧೂಮಾವತಿ ಕರಸೇವಾ ಸಮಿತಿಯ ಅಧ್ಯಕ್ಷರಾದ ಉದಯ ಕುಮಾರ್ ಕೋಲಾಡಿ ಮತ್ತು ಪದಾಧಿಕಾರಿಗಳು, ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.