ನೆಲ್ಯಾಡಿ: ನೆಲ್ಯಾಡಿ ಕಾಂಪ್ಲೆಕ್ಸ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನೆಲ್ಯಾಡಿ ಶಾಖೆಯು ನೆಲ್ಯಾಡಿ ಕೆಎಸ್ಆರ್ಟಿಸಿ ಬಸ್ನಿಲ್ದಾಣದ ಮುಂಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡ ಸೈಂಟ್ ಮೇರಿ ಕಾಂಪ್ಲೆಕ್ಸ್ನ ಮೊದಲ ಮಹಡಿಗೆ ಜ.20ರಂದು ಬೆಳಿಗ್ಗೆ ಸ್ಥಳಾಂತರಗೊಂಡು ಶುಭಾರಂಭಗೊಂಡಿತು.
ಪುತ್ತೂರು ಶಾಸಕ ಸಂಜೀವ ಮಠಂದೂರುರವರು ಉದ್ಘಾಟಿಸಿದರು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷರಾದ ಡಾ| ಎಂ.ಎನ್.ರಾಜೇಂದ್ರ ಕುಮಾರ್ರವರು ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ, ತಾ.ಪಂ.ಸದಸ್ಯೆಯರಾದ ಕೆ.ಟಿ.ವಲ್ಸಮ್ಮ, ಉಷಾ ಅಂಚನ್, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ, ಪುತ್ತೂರು ಎಪಿಎಂಸಿ ನಿರ್ದೇಶಕ ಬಾಲಕೃಷ್ಣ ಬಾಣಜಾಲು, ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷ ಇಬ್ರಾಹಿಂ ಎಂ.ಕೆ., ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ, ಪಿ. ಪಿ. ವಗೀ೯ಸ್, ಫಾ. ಆದಶ್೯ ಜೋಸೆಫ್, ಫಾ. ಪ್ರಫುಲ್ಯ, ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ ಬಿ ಜಯರಾಮ ರೈ ರವರು ಭಾಗವಹಿಸಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಧನ್ಯವಾದಗೈದರು. ನಿವೃತ ಮುಖ್ಯೋಪಾಧ್ಯಾಯ ರವೀಂದ್ರ ಟಿ ಕಾರ್ಯಕ್ರಮ ನಿರೂಪಣೆಗೈದರು.