ಪುತ್ತೂರು: ದ.ಕ.ಜಿ.ಪಂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ದ.ಕ.ಜಿಲ್ಲಾ ಯುವ ಜನ ಒಕ್ಕೂಟ ಮಂಗಳೂರು, ಪುತ್ತೂರು ತಾಲೂಕು ಯುವ ಜನ ಒಕ್ಕೂಟ, ಸವಣೂರು ಯುವಕ ಮಂಡಲ ಮತ್ತು ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜ್ ವತಿಯಿಂದ ಜಿಲ್ಲಾ ಯುವ ಸಪ್ತಾಹದ ಅಂಗವಾಗಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯು ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜ್ನಲ್ಲಿ ಜರಗಿತು. ಜಿ.ಪಂ, ಸದಸ್ಯೆ ಪ್ರಮೀಳಾ ಜನಾರ್ಧನ್ರವರು ಕಾರ್ಯಕ್ರಮ ಉದ್ಘಾಟಿಸಿದರು. ಸವಣೂರು ಗ್ರಾ.ಪಂ, ಅಧ್ಯಕ್ಷೆ ಇಂದಿರಾ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಆಡಳಿತಾಧಿಕಾರಿ ಆಶ್ವಿನ್ ಎಲ್ ಶೆಟ್ಟಿ, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಜಿಲ್ಲಾ ಯುವ ಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಸವಣೂರು ಗ್ರಾ.ಪಂ, ಸದಸ್ಯರುಗಳಾದ ರಾಜೀವಿ ಶೆಟ್ಟಿ, ಗಾಯತ್ರಿ, ಸತೀಶ್ ಬಲ್ಯಾಯರವರುಗಳು ಉಪಸ್ಥಿತರಿದ್ದರು. ತಾಲೂಕು ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ಕ್ರೀಡಾಧಿಕಾರಿ ಜಯರಾಮ ಗೌಡರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ವಾಮಿ ವಿವೇಕಾನಂದರ ಜೀವನದ ಬಗ್ಗೆ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣರವರು ಮಾತನಾಡಿದರು.
ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜ್ನ ಪ್ರಾಂಶುಪಾಲೆ ರಾಜಲಕ್ಷಿ ಎಸ್ ರೈ ಸ್ವಾಗತಿಸಿ, ತಾಲೂಕು ಯುವ ಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು ವಂದಿಸಿದರು. ನೆಹರೂ ಯುವ ಕೇಂದ್ರದ ಆದೇಶ್ ಶೆಟ್ಟಿ ಸಹಕರಿಸಿದರು.