HomePage_Banner
HomePage_Banner
HomePage_Banner
HomePage_Banner

ತಾಲೂಕಿನಾದ್ಯಂತ 71ನೇ ಗಣರಾಜ್ಯೋತ್ಸವ

Puttur_Advt_NewsUnder_1
Puttur_Advt_NewsUnder_1

70 ವರ್ಷಗಳ ಹಿಂದೆ 1950ನೇ ಜನವರಿ 26ರಂದು ಸಂವಿಧಾನಬದ್ಧವಾಗಿ ನಮ್ಮ ಭಾರತ ದೇಶ “ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ, ಪ್ರಜಾಸತ್ತಾತ್ಮಕ ಗಣರಾಜ್ಯ” ವೆಂದು ಘೋಷಿಸಲ್ಪಟ್ಟಿತು. ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಕ್ಷತೆಯಲ್ಲಿ ಸಂರಚಿತವಾದ ಈ ಸಂವಿಧಾನವು ಪ್ರತಿಯೊಬ್ಬ ಭಾರತೀಯನಿಗೆ ನ್ಯಾಯ, ಸಮಾನತೆ ಹಾಗೂ ಸ್ವಾತಂತ್ರ್ಯವನ್ನು ಒದಗಿಸಿದೆ.
ಜ.26ರಂದು ದೇಶದಾದ್ಯಂತ ಗಣರಾಜ್ಯೋತ್ಸವ ಆಚರಿಸುವ ಹಿನ್ನಲೆಯಲ್ಲಿ ಪುತ್ತೂರು ತಾಲೂಕಿನ ವಿವಿಧ ಇಲಾಖೆ, ಶಿಕ್ಷಣ ಸಂಸ್ಥೆ, ಸಂಘಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ.

ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕ

ಪುತ್ತೂರು: ಅಂಬಿಕಾ ಶಿಕ್ಷಣ ಸಂಸ್ಥೆಯ ವತಿಯಿಂದ ನಗರದ ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಅಂಬಿಕಾ ಶಿಕ್ಷಣ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಶ್ರೀ ಕೃಷ್ಣ ಉಪಾಧ್ಯಾಯ ಮಾತನಾಡಿದರು. ನಿವೃತ್ತ ಸೈನಿಕರಿಂದ ಹುತಾತ್ಮ ಯೋಧರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಪ್ರಾಸ್ತಾವಿಕ ಮಾತನಾಡಿದರು. ಆಡಳಿತ ಮಂಡಳಿ ಸದಸ್ಯರಾದ ಸುರೇಶ್ ಶೆಟ್ಟಿ, ಅಂಬಿಕಾ ವಿದ್ಯಾಸಂಸ್ಥೆಯ ಖಜಾಂಜಿ ಹಾಗು ಅಂಬಿಕಾ ಮಹಾವಿದ್ಯಾಲಯದ ಪ್ರಾಂಶುಪಾಲೆ ರಾಜಶ್ರೀ ನಟ್ಟೋಜ, ಅಂಬಿಕಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶಂಕರ ಭಟ್, ಉಪಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ, ಅಂಬಿಕಾ ಬಾಲ ವಿದ್ಯಾಲಯದ ಮುಖ್ಯಗುರು ಮಾಲತಿ, ಶಿಕ್ಷಕ ವೃಂದ, ವಿಧ್ಯಾರ್ಥಿ ವೃಂದ ಹಾಗು ಪೋಷಕರು ಉಪಸ್ಥಿತರಿದ್ದರು. ಸುರೇಶ್ ಶೆಟ್ಟಿ ಸ್ವಾಗತಿಸಿ ಸತ್ಯಜಿತ್ ಉಪಾಧ್ಯಾಯ ವಂದಿಸಿದರು. ವಿಧ್ಯಾರ್ಥಿಗಳು ಪ್ರಾರ್ಥಿಸಿದರು. ವಿಧ್ಯಾರ್ಥಿನಿ ಅಭಿಜ್ಞಾ ನಿರೂಪಿಸಿದರು.

ವಿವೇಕಾನಂದ ಪದವಿ ಹಾಗೂ ಪದವಿಪೂರ್ವ ಕಾಲೇಜು

ಪುತ್ತೂರು: ವಿವೇಕಾನಂದ ಪದವಿ ಹಾಗೂ ಪದವಿಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪಿ.ಶ್ರೀನಿವಾಸ ಪೈ ಧ್ವಜಾರೋಹಣ ಮಾಡಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಸ್ವಾಗತಿಸಿದರು. ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಡಾ.ಶ್ರೀಧರ ಎಚ್.ಜಿ, ಗಣಿತ ಸಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಶಂಕರನಾರಾಯಣ ಭಟ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ರಮೇಶ್ ಭಟ್, ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ನಾಯ್ಕ್, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ನರಸಿಂಹ ಭಟ್, ಎನ್.ಸಿ.ಸಿ ಘಟಕದ ನಿರ್ದೇಶಕ ಲೆ.ಅತುಲ್ ಶೆಣೈ, ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಅರುಣ್ ಪ್ರಕಾಶ್, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಉಪನ್ಯಾಸಕೇತರ ವೃಂದ, ಎನ್.ಸಿ.ಸಿ, ಎನ್‌ಎಸ್‌ಎಸ್, ರೋವರ್‍ಸ್ ಅಂಡ್ ರೇಂಜರ್‍ಸ್, ರೆಡ್ ಕ್ರಾಸ್ ಸಂಘಟನೆಯ ಸ್ವಯಂಸೇವಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಧ್ವಜಗೀತೆ, ರಾಷ್ಟ್ರಗೀತೆಗಳನ್ನು ಪ್ರಸ್ತುತಪಡಿಸಲಾಯಿತು.

ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಆಸ್ಪತ್ರೆ

ಪುತ್ತೂರು: ಮಾಜಿ ಸೈನಿಕ ಬಿಳಿಯೂರುಗುತ್ತು ಕಿಟ್ಟಣ್ಣ ಶೆಟ್ಟಿ ದ್ವಜಾರೋಹಣ ನೆರವೇರಿಸಿದರು. ಕಾಲೇಜಿನ ಪ್ರಾಂಶುಪಾಲೆ ಪ್ರೀತಾ ಸ್ವಾಗತಿಸಿದರು. ಉಪನ್ಯಾಸಕರು, ಆಸ್ಪತ್ರೆ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಯಕ್ಷಿತಾ ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ಮಾತನಾಡಿದರು. ಆಯಿಷತ್ ಮಹಾ ದೇಶ ಭಕ್ತಿ ಗೀತೆ ಹಾಡಿದರು. ಮಹಮ್ಮದ್ ಅನ್ಸರ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ನಾಯಕ ವಿಜಿತ್ ಸಹಕರಿಸಿದರು.

ಪ್ರಿಯದರ್ಶಿನಿ ವಿದ್ಯಾಸಂಸ್ಥೆ

ಪುತ್ತೂರು: ಶಾಲಾ ಸಂಚಾಲಕ ಡಾ|. ಸತೀಶ್ ರಾವ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸದಾಶಿವ ರೈ ಚೆಲ್ಯಡ್ಕ ಗಣರಾಜ್ಯೋತ್ಸವದ ಬಗ್ಗೆ ಮಾತನಾಡಿದರು. ಶಾಲಾ ಶಿಕ್ಷಕ ಪ್ರಶಾಂತ್ ಸ್ವಾಗತಿಸಿ ಸಹ ಶಿಕ್ಷಕಿ ಮೋಹಿನಿ ವಂದಿಸಿ ಕುಮಾರಿ ಪ್ರಾಪ್ತಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಭಾಗವಹಿಸಿದ್ದರು.

ನಮ್ಮೂರು ನಮ್ಮವರು ಮೈಂದಡ್ಕ ಸಂಸ್ಥೆ

ಪುತ್ತೂರು: ಮೈಂದಡ್ಕ ಮೈದಾನದಲ್ಲಿ ಕರಾಯ ಶಾಲಾ ನಿವೃತ್ತ ದೈಹಿಕ ಶಿಕ್ಷಕ, ಭಜನಾ ತರಬೇತುದಾರ ಬೊಮ್ಮಯ್ಯ ಬಂಗೇರ ಧ್ವಜಾರೋಹಣ ಮಾಡಿ ಮಾತನಾಡಿದರು. ಸಂಸ್ಥೆಯ ಗೌರವ ಸದಸ್ಯ ಯು.ಜಿ. ರಾಧ, ಗ್ರಾ.ಪಂ. ಉಪಾಧ್ಯಕ್ಷ ಆಸ್ಕರ್ ಆಲಿ ಸಂದರ್ಭೋಚಿತವಾಗಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಗಣೇಶ್ ನಾಯಕ್, ಸದಸ್ಯರು, ಊರಿನ ನಾಗರಿಕರು, ಶಾಲಾ ವಿದ್ಯಾರ್ಥಿಗಳು ಧ್ವಜ ವಂದನೆ ಸಲ್ಲಿಸಿದರು. ಪ್ರದೀಪ್ ತಾಳೆಹಿತ್ಲು, ಬಾಲಕೃಷ್ಣ ತಾಳೆಹಿತ್ಲು, ಗೀತಾ ತಾಳೆಹಿತ್ಲು, ಸತೀಶ್, ವಿಶ್ವನಾಥ ದರ್ಬೆ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

ಮೊಟ್ಟೆತ್ತಡ್ಕ ಡಿಸಿಆರ್

ಪುತ್ತೂರು: ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಕೆಮ್ಮಿಂಜೆ, ಮೊಟ್ಟೆತ್ತಡ್ಕದಲ್ಲಿ ಪ್ರಭಾರ ನಿರ್ದೇಶಕ ಡಾ. ಎಂ.ಜಿ. ನಾಯಕ್ ಧ್ವಜಾರೋಹಣ ಮಾಡಿ ಮಾತನಾಡಿದರು. ಸಂಸ್ಥೆಯ ವಿಜ್ಞಾನಿಗಳು, ತಾಂತ್ರಿಕ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ, ಸಂಸ್ಥೆಯ ನಿವೃತ್ತ ನೌಕರರೂ ಭಾಗವಹಿಸಿದ್ದರು.

ಸರಸ್ವತೀ ಸಮೂಹ ವಿದ್ಯಾಲಯ

ಕಡಬ: ನಿವೃತ ಯೋಧ ಶಾಂತಾರಾಮ ಪಾದೆಮಜಲು ಗಣರಾಜ್ಯೋತ್ಸವದ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು. ಸಂಸ್ಥೆಯ ಸಂಚಾಲಕರು, ಆಡಳಿತ ಮಂಡಳಿಯ ಪದಾಧಿಕಾರಿಗಳು, ಹೆತ್ತವರು, ವಿದ್ಯಾರ್ಥಿ ವೃಂದ, ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಪ್ರೇಮಲತಾ ಸ್ವಾಗತಿಸಿ, ಪ್ರೌಢಶಾಲೆಯ ಮುಖ್ಯಗುರು ಶೈಲಶ್ರೀ ವಂದಿಸಿದರು, ವನಿತಾ ಕಾರ್ಯಕ್ರಮ ನಿರೂಪಿಸಿದರು.

ನಿಡ್ಪಳ್ಳಿ ಶಾಲೆ

ನಿಡ್ಪಳ್ಳಿ : ಎಸ್.ಡಿ.ಎಂ.ಸಿ ಅಧ್ಯಕ್ಷ ಗಂಗಾಧರ ಸಿ.ಎಚ್ ಧ್ವಜಾರೋಹಣ ನೆರವೇರಿಸಿದರು. ನಂತರ ಸಂವಿಧಾನ ಶಿಲ್ಪಿ ಡಾ.ಬಿ.ಅರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸರಕಾರದ ಆದೇಶದಂತೆ ಪ್ಲಾಸ್ಟಿಕ್ ಬಳಕೆ ನಿಷೇದಿಸುವ ನಿಟ್ಟಿನಲ್ಲಿ ಮೆಟಲ್ ಪಾತ್ರೆಗಳನ್ನು ಉಪಯೋಗಿಸುವ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಯಿತು. ಸಹಶಿಕ್ಷಕಿ ಶಾರದಾ ಸ್ವಾಗತಿಸಿ ಪ್ರಭಾರ ಮುಖ್ಯ ಗುರು ಸರಸ್ವತಿ ವಂದಿಸಿದರು. ಅತಿಥಿ ಶಿಕ್ಷಕಿಯರಾದ ಸುಮ.ಡಿ, ಚಂದ್ರಕಲಾ. ಡಿ ಸಹಕರಿಸಿದರು. ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡರು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.