Home_Page_Advt
Home_Page_Advt
Breaking News

ಅರಣ್ಯ ಇಲಾಖೆಯಿಂದ ರೈತರ ಕೃಷಿ ಭೂಮಿಗೆ ಅಕ್ರಮ ಪ್ರವೇಶ: ಗೂಂಡಾ ಇಲಾಖೆಯಾಗಿ ವರ್ತಿಸುತ್ತಿರುವ ಅರಣ್ಯ ಇಲಾಖೆ – ರೈತ ಸಂಘದಿಂದ ಆರೋಪ

  • ಕೃಷಿಕರ ಕೃಷಿ ಹಾನಿ ನಷ್ಟವನ್ನು ಅರಣ್ಯ ಇಲಾಖೆ ಭರಿಸಬೇಕು
  • ಬೇಡಿಕೆಗಳು ಈಡೇರದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

ಪುತ್ತೂರು: ಕಳೆದ 40 ವರ್ಷಗಳಿಂದ ತಮ್ಮ ವಶದಲ್ಲಿರಿಸಿಕೊಂಡು ಒಳಮೊಗ್ರು ಗ್ರಾಮದಲ್ಲಿ ಸರಕಾರಿ ಭೂಮಿಯನ್ನು ಬಳಸಿಕೊಂಡು ಕೃಷಿ ಮಾಡಿಕೊಂಡು ಬಂದಿರುವ ರೈತರ ಕೃಷಿ ಜಮೀನನ್ನು ಯಾವುದೇ ಮುನ್ಸೂಚನೆ ನೋಟೀಸು ನೀಡದೆ ವಶಪಡಿಸಿಕೊಳ್ಳುವ ಕಾರ್ಯವನ್ನು ಅರಣ್ಯ ಇಲಾಖೆ ಮಾಡುತ್ತಿದೆಯಲ್ಲದೆ ಕೃಷಿಕರ ಕೃಷಿ ಜಮೀನಿಗೆ ಅಕ್ರಮವಾಗಿ ಪ್ರವೇಶಿಸಿ ಗಡಿಗುರುತು-ಅಗಲು ನಿರ್ಮಿಸಿ ಕೃಷಿ ನಾಶ ಮಾಡುವ ಮೂಲಕ ರೈತರ ಮೇಲೆ ದೌರ್ಜನ್ಯ ಎಸಗಿಸುವ ಮೂಲಕ ಗೂಂಡಾ ಇಲಾಖೆಯಾಗಿ ವರ್ತಿಸುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ಜಿಲ್ಲಾಧ್ಯಕ್ಷ ಸುರೇಶ್ ಭಟ್ ಕೊಜಂಬೆ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಅರಣ್ಯ ಇಲಾಖೆಯವರು ಒಂದು ವಾರದೊಳಗೆ ಅಗಲು ಮುಚ್ಚಬೇಕು. ರೈತರಿಗಾದ ನಷ್ಟವನ್ನು ಇಲಾಖೆಯೇ ಭರಿಸಬೇಕು. ಅತಿಕ್ರಮಣ ಮಾಡಿರುವ ಅರಣ್ಯ ಇಲಾಖೆಯ ಮುಖ್ಯಸ್ಥರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಬೇಕು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಅರಣ್ಯ ಇಲಾಖಾಧಿಕಾರಿ ಪರಿಶೀಲನೆ ನಡೆಸಿ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು ನಮ್ಮ ಈ ಬೇಡಿಕೆಗಳು ಈಡೇರದಿದ್ದಲ್ಲಿ ಅಲ್ಲಿನ ಕೃಷಿಕರು, ಸಾರ್ವಜನಿಕರನ್ನು ಸೇರಿಸಿಕೊಂಡು ಉಗ್ರ ಹೋರಾಟ ಆರಂಭಿಸುತ್ತೇವೆ. ಅನಿವಾರ್ಯವಾದರೆ ಕಾನೂನನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ರೈತ ಸಂಘ ಹಸಿರುಸೇನೆಯ ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಪಾದೆಕಲ್ಲು,ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಪುಚ್ಚೆತ್ತಡ್ಕ, ತಾಲ್ಲೂಕು ಘಟಕದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಹೊಳ್ಳ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.