ಪುತ್ತೂರು: ಯಕ್ಷಗಾನ ಬಯಲಾಟ ಸೇವಾ ಸಮಿತಿ ಬೆಟ್ಟಂಪಾಡಿ ಇದರ 35 ನೇ ವರ್ಷದ ಹತ್ತು ಸಮಸ್ತರ ಸೇವಾರ್ಥ ಬೆಟ್ಟಂಪಾಡಿ ಬಿಲ್ವಗಿರಿಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯವರಿಂದ ‘ಸಂಪೂರ್ಣ ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ಮಾ. 1 ರಂದು ನಡೆಯಲಿದೆ.
ಸಂಜೆ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಶ್ರೀದೇವಿಯ ವೈಭವದ ಮೆರವಣಿಗೆ ಬಿಲ್ವಗಿರಿಗೆ ನಡೆಯಲಿದೆ. ರಾತ್ರಿ ಚೌಕಿಪೂಜೆ ನಡೆದು ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ. ಕಲಾಭಿಮಾನಿಗಳು ಸರ್ವ ರೀತಿಯಲ್ಲಿ ಸಹಕರಿಸುವಂತೆ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.