ರಾಜ್ಯ ಪತ್ರಕರ್ತರ ಸಮ್ಮೇಳನ: ಪಬ್ಲಿಕ್ ಟಿವಿಯ ಬದ್ರುದ್ದೀನ್ ಮಾಣಿಯವರಿಗೆ ಪ್ರಶಸ್ತಿ ಪ್ರದಾನ

Puttur_Advt_NewsUnder_1
Puttur_Advt_NewsUnder_1


ಮಂಗಳೂರು: ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ವತಿಯಿಂದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಂಗಳೂರು ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆದ ೩೫ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಜೀವಮಾನದ ವೃತ್ತಿ ಸಾಧನೆಗಾಗಿ ಪಬ್ಲಿಕ್ ಟಿವಿಯ ಪೊಲಿಟಿಕಲ್ ಹೆಡ್ ಮಾಣಿಯ ಬದ್ರುದ್ದೀನ್ ಕೆ.ರವರಿಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶಸ್ತಿ ಪ್ರದಾನ ಮಾಡಿದರು.

ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ, ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಜಿ.ಕೃಷ್ಣಪಾಲೆಮಾರ್, ಮಹಾರಾಷ್ಟ್ರ ಕನ್ನಡಿಗರ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಬಿ.ಸಿ. ಲೋಕೇಶ್, ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನ ರೈ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್‌ನ ಅಧ್ಯಕ್ಷ ಆನಂದ್ ಶೆಟ್ಟಿ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.