ಮಂಗಳೂರಿನ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೊನಾ ಶಂಕಿತ ವ್ಯಕ್ತಿ ವಿಟ್ಲ ಸಮೀಪ ಪತ್ತೆ ಪತ್ನಿ ಮನೆಯಿಂದ ಬಂಟ್ವಾಳ ಆಸ್ಪತ್ರೆಗೆ ವರ್ಗಾವಣೆ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ದುಬೈನಿಂದ ಊರಿಗೆ ಮರಳಿದ ಮಂಗಳೂರು ತಾಲೂಕಿನ ತಲಪಾಡಿ ಸಮೀಪದ ಕೆ.ಸಿ ನಗರ ನಿವಾಸಿ ವ್ಯಕ್ತಿಯೋರ್ವರಿಗೆ ಕೊರೋನಾ ಬಾಧಿಸಿದೆ ಎಂದು ಶಂಕೆವ್ಯಕ್ತಪಡಿಸಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲುಮಾಡಲಾಗಿತ್ತಾದರೂ ನಸುಕಿನ ವೇಳೆ ಆಸ್ಪತ್ರೆಯಿಂದ ಪರಾರಿಯಾಗಿರುವ ಆತನನ್ನು ವಿಟ್ಲ ಠಾಣಾ ವ್ಯಾಪ್ತಿಯ ಪಳಿಕೆ ಸಮೀಪದ ರಂಗರಮಜಲು ಎಂಬಲ್ಲಿ ಪತ್ತೆ ಹಚ್ಚಿದ ಪೊಲೀಸರು ಆರೋಗ್ಯ ಇಲಾಖೆ ಹಾಗೂ ತಾಲೂಕು ದಂಡಾಧಿಕಾರಿಗಳ ಸಮಕ್ಷಮದಲ್ಲಿ ಬಂಟ್ವಾಳ ಆಸ್ಪತ್ರೆಗೆ ವರ್ಗಾವಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ದುಬೈನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ತಾಲೂಕಿನ ತಲಪಾಡಿ ಸಮೀಪದ ಕೆ.ಸಿ. ರೋಡ್ ನಿವಾಸಿ ಫಮೀಜಾ ಮಂಜಿಲ್‌ನ ಖಾಲೀದ್ ರವರ ಪುತ್ರ ಮಹಮ್ಮದ್ ಅಜರುದ್ದೀನ್ (30 ವ.) ರವರು ಇದೀಗ ಶಂಕಿತ ಕೊರೋನದಿಂದ ಆಸ್ಪತ್ರೆಗೆ ದಾಖಲಾದವರು. ಮಹಮ್ಮದ್ ಅಜರುದ್ದೀನ್‌ರವರು ದುಬೈನಿಂದ ಊರಿಗೆ ಮರಳುವ ಹಿನ್ನೆಲೆಯಲ್ಲಿ ಮಾ.೮ರಂದು ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದರು. ಈ ವೇಳೆ ಅವರ ಆರೋಗ್ಯ ತಪಾಸಣೆ ನಡೆಸಿದಾಗ ಅವರಿಗೆ ಜ್ವರ ಇರುವ ಹಿನ್ನಲೆಯಲ್ಲಿ ಕೊರೊನಾ ಶಂಕೆಯ ಮೇಲೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಮಾ.9ರ ಬೆಳಗ್ಗಿನ ಜಾವ ಆಸ್ಪತ್ರೆಯಿಂದ ಹೊರ ಬಂದ ಅಜರುದ್ದೀನ್ ಬಳಿಕ ಆಸ್ಪತ್ರೆಗೆ ಆಗಮಿಸದೆ ನಾಪತ್ತೆಯಾಗಿದ್ದರು. ಇದರಿಂದ ಗಾಬರಿಗೊಂಡ ಆಸ್ಪತ್ರೆ ಸಿಬಂಧಿಗಳು ಮೇಲಾಧಿಕಾರಿಗಳಿಗೆ ವಿಚಾರ ತಿಳಿಸಿದ್ದರು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ನಾಪತ್ತೆಯಾಗಿದ್ದ ಅಜರುದ್ದೀನ್ ಅವರ ಪತ್ತೆಗೆ ವ್ಯಾಪಕ ಹುಡುಕಾಟ ಆರಂಭಿಸಿದ್ದರು. ಈ ಮಧ್ಯೆ ನಾಪತ್ತೆಯಾಗಿದ್ದ ವ್ಯಕ್ತಿ ಬಂಟ್ವಾಳ ತಾಲೂಕು ವಿಟ್ಲದ ಪಳಿಕೆ ರಂಗರಮಜಲು ಎಂಬಲ್ಲಿರುವ ಪತ್ನಿಯ ಮನೆಗೆ ಆಗಮಿಸಿರುವ ಬಗ್ಗೆ ಮಾಹಿತಿ ಅರಿತ ವಿಟ್ಲ ಠಾಣಾ ಎಸ್.ಐ. ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕಾಗಮಿಸಿ ವಿಚಾರಣೆ ನಡೆಸಿದಾಗ ಆ ವ್ಯಕ್ತಿ ಅಲ್ಲಿ ಪತ್ತೆಯಾಗಿದ್ದರು. ಮನೆಯಿಂದ ಯಾರೂ ಹೊರಬಾರದಂತೆ ಪೊಲೀಸರು ಎಚ್ಚರಿಕೆ ನೀಡಿದ್ದರು ಮಾತ್ರವಲ್ಲದೆ ಸ್ಥಳದಲ್ಲಿ ಸಿಬ್ಬಂದಿ ಹೇಮಾ ಅವರನ್ನು ನಿಯೋಜಿಸಿದರು. ಬಂಟ್ವಾಳ ತಾಲೂಕು ದಂಡಾಧಿಕಾರಿಗಳಾದ ರಶ್ಮಿ ಎಸ್. ಆರ್., ತಾಲೂಕು ವೈದ್ಯಾಧಿಕಾರಿ ದೀಪಾ ಪ್ರಭು ಭೇಟಿ ನೀಡಿ ಸೂಕ್ತ ಕ್ರಮಗಳನ್ನು ಕೈಗೊಂಡರು. ಪ್ರಭಾರ ಕಂದಾಯ ನಿರೀಕ್ಷಕ ರಾಮ ಕೆ., ಗ್ರಾಮ ಕರಣಿಕರಾದ ಮಂಜುನಾಥ ಕೆ. ಎಚ್., ಗ್ರಾಮ ಸಹಾಯಕರಾದ ಗಿರೀಶ್, ಲಿಂಗಪ್ಪ ಗೌಡ, ಗಣೇಶ್ ಪ್ರಭು, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಸುಜಾತ, ಜೀವನ್, ಪ್ರಶಾಂತ್, ದೀಪಾ, ಗೀತಾ, ಉಮಾ, ವೀರಮ್ಮ ಮೊದಲಾದವರು ಸ್ಥಳದಲ್ಲಿ ಉಪಸ್ಥಿತರಿದ್ದರು.

ತಪಾಸಣೆ ವೇಳೆ ಪಾಸಿಟಿವ್ ಫಲಿತಾಂಶ..

ವಿಮಾನ ನಿಲ್ದಾಣದಲ್ಲಿ ಅಜರುದ್ದೀನ್ ಅವರ ತಪಾಸಣೆ ವೇಳೆ ಪಾಸಿಟಿವ್ ಫಲಿತಾಂಶ ಬಂದಿತ್ತು. ಇದುವೇ ಆತ ಪರಾರಿಯಾಗಲು ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಜಿಲ್ಲಾಧಿಕಾರಿಯವರು ಪ್ರತಿಕ್ರಿಯೆ ನೀಡಿ ಮಂಗಳೂರಿನಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪತ್ತೆಯಾಗಿಲ್ಲ ಎಂದು ಹೇಳಿಕೆ ನೀಡಿದ್ದು, ಜನರಲ್ಲಿ ಆತಂಕ ದೂರವಾಗಿತ್ತು. ಇದೀಗ ಪತ್ತೆಯಾದ ವ್ಯಕ್ತಿಯನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗಿದ್ದು, ವರದಿ ಬಂದ ಬಳಿಕ ನೈಜಾಂಶ ಹೊರಬೀಳಲಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.