ಸಂತ ಫಿಲೋಮಿನಾ ಕಾಲೇಜಿನಲ್ಲಿ ವಯೋನಿವೃತ್ತರಿಗೆ ಗೌರವಾರ್ಪಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಿವಿಧ ವಿಭಾಗಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ಈ ಶೈಕ್ಷಣಿಕ ವರ್ಷದಲ್ಲಿ ವಯೋನಿವೃತ್ತಿ ಹೊಂದುತ್ತಿರುವ ನಾಲ್ಕು ಮಂದಿ ಸಿಬ್ಬಂದಿಗಳನ್ನು ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಗೌರವಾದರಗಳಿಂದ ಸಮ್ಮಾನಿಸಲಾಯಿತು. ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಹಾಗೂ ಡೀನ್ ಪ್ರೊ. ಗಣಪತಿ ಎಸ್, ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಹಾಗೂ ಡೀನ್ ಪ್ರೊ. ಮ್ಯಾಕ್ಸಿಂ ಕಾರ್ಲ್, ಸಸ್ಯಶಾಸ್ತ್ರ ವಿಭಾಗ ಮುಖಸ್ಥ ಡಾ. ಪ್ರಸನ್ನ ರೈ ಕೆ ಮತ್ತು ಕಛೇರಿ ಆಡಳಿತ ಸಿಬ್ಬಂದಿ ಜೋಕಿಮ್ ಮಿನೇಜಸ್ ಸಂಸ್ಥೆಯ ವತಿಯಿಂದ ನೀಡಲಾದ ಪುರಸ್ಕಾರಗಳನ್ನು ಸ್ವಿಕರಿಸಿದರು.

ಕಾಲೇಜಿನ ಸಂಚಾಲಕ ಅತಿ ವಂ. ಆಲ್ಫ್ರೆಡ್ ಜೆ ಪಿಂಟೊ, ಅಡ್ವಾನ್ಸ್‌ಡ್ ಟೆಕ್ನಿಕಲ್ ಸರ್ವಿಸಸ್ ಹಾಗೂ ಅಸೋಸಿಯೇಟೆಡ್ ಟೆಕ್ನಿಕಲ್ ಸರ್ವಿಸಸ್, ಕತಾರ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಎಮ್ ರವಿ ಶೆಟ್ಟಿ, ಪ್ರಾಚಾರ್ಯ ಪ್ರೊ. ಲಿಯೊ ನೊರೊನ್ಹಾ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ಹಾಗೂ ಕ್ಯಾಂಪಸ್ ನಿರ್ದೇಶಕ ವಂ. ಡಾ. ಆಂಟನಿ ಪ್ರಕಾಶ್ ಮೊಂತೆರೊ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಮ್ಮಣ್ಣ ರೈ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎ. ಜಗಜೀವನ್‌ದಾಸ್ ರೈ ಮೊದಲಾದವರು ನಿವೃತ್ತರನ್ನು ಸನ್ಮಾನಗೈದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.