ಆರ್.ಟಿ.ಇ ಅಡಿಯಲ್ಲಿ ಶಾಲೆಗಳಿಗೆ ಹಣ ನೀಡುವುದನ್ನು ನಿಲ್ಲಿಸಿ: ಸರಕಾರಿ ನೌಕರರ, ಅಧಿಕಾರಿಗಳ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಲು ಕಾನೂನು ರೂಪಿಸಿ:

Puttur_Advt_NewsUnder_1
Puttur_Advt_NewsUnder_1
  • ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯಿಂದ ಎ.ಸಿ ಮುಖಾಂತರ ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಮನವಿ


ಪುತ್ತೂರು: ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಹಾಗೂ ಅನುದಾನಿತ ಶಾಲೆಗಳಿಗೆ ಆರ್.ಟಿ.ಇ ಅಡಿಯಲ್ಲಿ ಮಕ್ಕಳನ್ನು ಸರಕಾರವೇ ಕಳುಹಿಸಿ ಅದರ ಹೆಸರಿನಲ್ಲಿ ಶಾಲೆಗಳಿಗೆ ಹಣ ನೀಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ವತಿಯಿಂದ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಮಾ.೯ರಂದು ಮನವಿ ಸಲ್ಲಿಸಲಾಯಿತು. ಒಂದು ವೇಳೆ ಹಣ ನೀಡುವುದನ್ನು ನಿಲ್ಲಿಸದೇ ಇದ್ದರೆ ಸರಕಾರಿ ಶಾಲೆಗಳ ವಾರಸುದಾರರ ಪ್ರತಿನಿಧಿಗಳ ಸಂಘಟನೆಯಾದ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ವತಿಯಿಂದ ರಾಜ್ಯಾದ್ಯಂತ ಚಳುವಳಿ ಹಮ್ಮಿಕೊಳ್ಳಬೇಕಾದೀತು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಅಲ್ಲದೇ ಸರಕಾರಿ ಬಸ್ ಪಾಸ್ ಅವಧಿಯನ್ನು ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಶೈಕ್ಷಣಿಕ ರಜೆ ಸಿಗುವವರೆಗೂ ಮುಂದುವರಿಸಬೇಕು. ಸರಕಾರದ ಉದ್ಯೋಗದಲ್ಲಿರುವ ಎಲ್ಲ ನೌಕರರು ಮತ್ತು ಅಧಿಕಾರಿಗಳು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರಕಾರಿ ಶಾಲೆಗೆ ಸೇರಿಸುವಂತೆ ಕಾನೂನು ರೂಪಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ರಾಜ್ಯಾಧ್ಯಕ್ಷ ಮೊಯ್ದಿನ್ ಕುಟ್ಟಿ, ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ನೆಲ್ಯಾಡಿ, ಅಝೀಝ್ ಬಡಕೋಡಿ, ಹೊನ್ನಪ್ಪ ಪುತ್ತೂರು ಮತ್ತು ಇಬ್ರಾಹಿಂ ಕೊಡಿಪಾಡಿ ಮನವಿ ನೀಡುವ ನಿಯೋಗದಲ್ಲಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.