ಚೀನಾ ದೇಶಕ್ಕೆ ಹೋದ ವ್ಯಕ್ತಿ ಕಡಬಕ್ಕೆ ವಾಪಾಸು.. ಕಡಬ ಪರಿಸರದಲ್ಲಿ ಆತಂಕ!

Puttur_Advt_NewsUnder_1
Puttur_Advt_NewsUnder_1
  • ಕೊರೋನಾದ ಯಾವುದೇ ಲಕ್ಷಣಗಳಿಲ್ಲ ಆತಂಕ ಬೇಡ – ಡಾ.ತ್ರಿಮೂರ್ತಿ

ಕಡಬ: ಚೀನಾ ದೇಶದಿಂದ ಆರಂಭಗೊಂಡ ಕೊರೋನಾ ವೈರಸ್‌ ಜಗತ್ತಿನ ವಿವಿಧೆಡೆ ವ್ಯಾಪಿಸಿರುವ ನಡುವೆಯೇ ಚೀನಾ ದೇಶಕ್ಕೆ ತೆರಳಿದ್ದ ವ್ಯಕ್ತಿಯೋರ್ವರು ಕಡಬಕ್ಕೆ ಆಗಮಿಸಿದ್ದರಿಂದ ಪರಿಸರದಲ್ಲಿ ಆತಂಕಗೊಂಡ ಘಟನೆ ವರದಿಯಾಗಿದೆ.

ಚೀನಾ ದೇಶಕ್ಕೆ ತೆರಳಿದ್ದ ಕಡಬದ ವ್ಯಕ್ತಿಯೋರ್ವರು ಎರಡು ದಿನಗಳ ಹಿಂದೆ ಕಡಬಕ್ಕೆ ಮರಳಿದ್ದು, ವಿಮಾನ ನಿಲ್ದಾಣದಲ್ಲಿ ಅವರನ್ನು ತಪಾಸಣೆಗೊಳಪಡಿಸಿದಾಗ ಕೊರೋನಾ ವೈರಸ್ ಲಕ್ಷಣಗಳು ಕಂಡುಬಾರದ ಹಿನ್ನೆಲೆಯಲ್ಲಿ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಆದರೆ ಅವರ ಮನೆಯ ಪರಿಸರದಲ್ಲಿ ಕೆಲವರು ಆತಂಕ ವ್ಯಕ್ತಪಡಿಸಿದ್ದರಿಂದ ಮಾ.11ರಂದು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸಿ ಆರೋಗ್ಯ ತಪಾಸಣೆ ನಡೆಸಿ ಮನೆಗೆ ಹಿಂತಿರುಗಿದ್ದಾರೆ.

ಚೀನಾದಿಂದ ಆಗಮಿಸಿದ ವ್ಯಕ್ತಿಯೋರ್ವರು ಕಡಬಕ್ಕೆ ಆಗಮಿಸಿದ್ದು, ಸ್ಥಳೀಯರು ತಿಳಿಸಿದ್ದರಿಂದ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ತಪಾಸಣೆ ನಡೆಸಲಾಗಿದ್ದು, ಕೊರೋನಾ ವೈರಸ್ ಲಕ್ಷಣಗಳು ಕಂಡುಬಾರದ ಹಿನ್ನೆಲೆಯಲ್ಲಿ ಕಳುಹಿಸಿಕೊಡಲಾಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ತ್ರಿಮೂರ್ತಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.