ಮಾ.13: ಅಡೆಂಜ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ

Puttur_Advt_NewsUnder_1
Puttur_Advt_NewsUnder_1

ಕಡಬ: ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಾ. 13ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದ್ದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳೊಂದಿಗೆ ನಡೆಯಲಿದೆ.

ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತೀ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಪಂಚವಿಶಂತಿ ಕಲಶಪೂಜೆ ನಡೆದು ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ದೈವಗಳಿಗೆ ಮತ್ತು ನಾಗದೇವರಿಗೆ ತಂಬಿಲ ಸೇವೆ, ನಡೆದು ಮಹಾಪೂಜೆ ನಡೆಯಲಿದೆ. ಬಳಿಕ ಪ್ರಸಾದ ವಿತರಿಸಿ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 8.00ಕ್ಕೆ ಮಹಾಪೂಜೆ ನಡೆದು ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ಬೆಡಿ ಪ್ರದರ್ಶನ, ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ ಮಂತ್ರಾಕ್ಷತೆ ನಡೆಯಲಿದೆ. ರಾತ್ರಿ 11.30ರಿಂದ ಅಡೆಂಜ ಶಿವಗಣೇಶ ಫ್ರೆಂಡ್ಸ್ ಪ್ರಾಯೋಜಕತ್ವದಲ್ಲಿ ಎಡಮಂಗಲ ಲಕ್ಷ್ಮಣ ಆಚಾರಿಯವರ ಸಂಯೋಜಕತ್ವದ ಶ್ರೀ ಗೋಪಾಲಕೃಷ್ಣ ಕೃಪಾಪೋಷಿತಾ ಯಕ್ಷಗಾನ ಮಂಡಳಿಯವರಿಂದ ಸರ್ಪ ಸಿರಿಮುಡಿ ಎಂಬ ತುಳು ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ದೇವಸ್ಥಾನದ ಅನುವಂಶಿಕ ಮೋಕ್ತೇಸರ ಎಸ್.ಸಂಜೀವ ಗೌಡ ಸಾಂತ್ಯಡ್ಕ, ಆಡಳಿತ ಮಂಡಳಿ ಅಧ್ಯಕ್ಷ ಕರುಣಾಕರ ಈಚಿಲಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್ ಕೆರ್ನಡ್ಕ, ಭಜನಾ ಮಂಡಳಿ ಅಧ್ಯಕ್ಷ ಪದ್ಮನಾಭ ಗೌಡ ಕೆರ್ನಡ್ಕ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.