ಕುಟ್ರುಪಾಡಿ ಉದ್ಯೋಗ ಖಾತ್ರಿ ವಿಶೇಷ ಗ್ರಾಮ ಸಭೆ

Puttur_Advt_NewsUnder_1
Puttur_Advt_NewsUnder_1

ಕಡಬ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕುಟ್ರುಪಾಡಿ ಗ್ರಾಮ ಪಂಚಾಯತ್‌ನ 2019-20ನೇ ಸಾಲಿನ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಗ್ರಾ.ಪಂ. ಸಭಾಂಗಣದಲ್ಲಿ ಮಾ.12ರಂದು ನಡೆಯಿತು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸುರೇಶ್ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಗ್ರಾಮಸ್ಥರು ಹಲವಾರು ಅಭಿವೃದ್ದಿ ಕೆಲಸಗಳನ್ನು ಮಾಡಬಹುದಾಗಿದೆ, ಸಾರ್ವಜನಿಕ ಹಾಗೂ ವೈಯಕ್ತಿಕ ಕಾಮಗಾರಿಗಳನ್ನು ಮಾಡಬಹುದಾಗಿದೆ ಗ್ರಾಮಸ್ಥರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದ ಅವರು ಈಗಾಗಲೇ ಶಿಕ್ಷಣ ಇಲಾಖೆಗೆ ಕೇಂದ್ರ ಸರಕಾರದಿಂದ ಬರುವ ಅನುದಾನಗಳು ಕಡಿಮೆಯಾಗಿದ್ದು ಶಾಲಾ ಆವರಣ ಗೋಡೆ, ಬಾವಿ ಶೌಚಾಲಯ ಮೊದಲಾದ ಕೆಲಸಗಳನ್ನು ಉದ್ಯೋಗ ಖಾತರಿ ಯೋಜನೆಯ ಮೂಲಕ ಮಾಡಿಕೊಳ್ಳಲು ಅವಕಾಶವಿದೆ ಎಂದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ.ಕೆ ಗೋಗಟೆ, ಉಪಾಧ್ಯಕ್ಷ ಆನಂದ ಪೂಜಾರಿ, ಸದಸ್ಯರಾದ ಶಿವಪ್ರಸಾದ್ ಪುತ್ತಿಲ, ಲಿಂಗಪ್ಪ ಗೌಡ, ಜಾನಕಿ ಉದ್ಯೋಗ ಖಾತರಿಯ ತಾಲೂಕು ಸಂಯೋಜಕ ಚಂದ್ರಶೇಖರ್, ತಾಲೂಕು ಉದ್ಯೋಗ ಖಾತರಿ ಯೋಜನೆಯ ತಾಂತ್ರಿಕ ಅಭಿಯಂತರರಾದ ಸವಿತಾ ಲೋಬೋ, ಮನೋಜ್, ಸಂಪನ್ಮೂಲ ವ್ಯಕ್ತಿಗಳಾದ ಜಯಮಣಿ, ಸುಪ್ರೀಯ, ಶ್ವೇತಾಶ್ರೀ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ವಿಲ್ಪೈಡ್ ಲಾರೆನ್ಸ್ ರೋಡ್ರಿಗಸ್ ಸ್ವಾಗತಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.