ತಣ್ಣೀರುಪಂತ ರುದ್ರಗಿರಿಗೆ ಪುತ್ತೂರಿನಿಂದ ಹೊರಕಾಣಿಕೆ ಸಮರ್ಪಣೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು:ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಮಾ.೮ರಿಂದ ೧೫ರ ತನಕ ನಡೆಯಲಿರುವ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಲಕಶೋತ್ಸವ ಹಾಗೂ ಸಪರಿವಾರ ದೈವಗಳ ಪ್ರತಿಷ್ಠೆ ಮತ್ತು ನೇಮೋತ್ಸವಕ್ಕೆ ಮಾ.೧೨ರಂದು ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು.

ತಾಲೂಕಿನ ವಿವಿಧ ಮೂಲೆಗಳಿಂದ ಸುವಸ್ತುಗಳನ್ನು ಸಂಗ್ರಹಿಸಿ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾಗಿರುವ ನೆಲ್ಲಿಕಟ್ಟೆ ಜಗದೀಶ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಹೊರಕಾಣಿಕೆ ಸಮರ್ಪಣೆಗೆ ದೇವಸ್ಥಾನದ ಮುಂಭಾಗದಲ್ಲಿ ತೆಂಗಿನ ಕಾಯಿ ಒಡೆದು ಚಲನೆ ನೀಡಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನೆಲ್ಲಿಕಟ್ಟೆ ಜಗದೀಶ ಶೆಟ್ಟಿ, ನಗರ ಸಭಾ ಮಾಜಿ ಸದಸ್ಯ ನವೀನ್‌ಚಂದ್ರ ನಾಕ್ ಸೇರಿದಂತೆ ಹಲವು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸುಮಾರು ೩೦ಕ್ಕೂ ಅಧಿಕ ಸುವಸ್ಥುಗಳನ್ನು ತುಂಬಿದ ವಾಹನಗಳು ಮೆರವಣಿಗೆಯಲ್ಲಿ ಸಾಗಿದವು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.