ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಡಿಪಿಪಿ ಕಾರ್ಯಕ್ರಮ ಉದ್ಘಾಟನೆ


ಉಪ್ಪಿನಂಗಡಿ: ಪಿಯುಸಿ ವಿದ್ಯಾರ್ಥಿಗಳಲ್ಲಿ ಜೆಇಇ/ನೀಟ್/ಸಿಇಟಿ.ಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜು ಡಿಪಿಪಿ ಪ್ರಯೋಗ ಕಾರ್‍ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್‍ಯಕ್ರಮವನ್ನು ಇಂದ್ರಪ್ರಸ್ಥ ವಿದ್ಯಾ ಸಂಸ್ಥೆಯ ಅಧ್ಯಕ್ಷ ಯುಎಸ್‌ಎ. ನಾಯಕ್ ಉದ್ಘಾಟಿಸಿ ಮಾತನಾಡಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು ತನ್ನ ಆರಂಭಿಕ ವರ್ಷದಿಂದಲೂ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಷ್ಟ್ರಮಟ್ಟದ ಸಾಧನೆ ಮಡುವಲ್ಲಿ ಮಹತ್ತರ ಪಾತ್ರವಹಿಸುತ್ತಾ ಬಂದಿದೆ, ಪ್ರಸ್ತುತ ಇಂದಿನ ಶೈಕ್ಷಣಿಕ ವ್ಯವಸ್ಥೆಗೆ ಅನುಗುಣವಾಗಿ ಡಿಪಿಪಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಎಚ್.ಕೆ. ಪ್ರಕಾಶ್ ಡಿಪಿಪಿ ಅಧ್ಯಯನ ವಸ್ತುಗಳು ಹಾಗೂ ಮಾಹಿತಿಯನ್ನು ನೀಡಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಕ್ಷಮತೆಯನ್ನು ವರ್ಧಿಸುವಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು ಸದಾ ವಿಶಿಷ್ಠ ಹಾಗೂ ವಿನೂತನ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದೆ ಎಂದರು.

ರಸಾಯನ ಶಾಸ್ತ್ರ ಉಪನ್ಯಾಸಕಿ ಕು| ರಜತಾ ಎಂ. ಸ್ವಾಗತಿಸಿ, ಕು| ಜಯಂತಿ ಎಕೆ. ವಂದಿಸಿದರು. ಭೌತಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವಾತಿ ಬಿಎಸ್ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.