ಕೊರೋನಾ ವೈರಸ್ ಹಿನ್ನೆಲೆ-ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾಟ ಮುಂದೂಡಿಕೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮಾ.೨೦ರಿಂದ ಮಾ.೨೨ ರ ತನಕ ತೆಂಕಿಲ ವಿವೇಕಾನಂದ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಬೇಕಾಗಿದ್ದ ರಾಷ್ಟ್ರೀಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಆಹ್ವಾನಿತ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವನ್ನು ಏ.೨೪,೨೫,೨೬ಕ್ಕೆ ಮುಂದೂಡಲಾಗಿದೆ ಎಂದು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಜಯರಾಮ ಗೌಡ ಹೇಳಿದರು.

ಮಾ.೧೩ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲಿಬಾಲ್ ಅಸೋಸಿಯೇಶನ್ ಹಾಗೂ ಸೆವೆನ್ ಡೈಮಂಡ್ಸ್ ಯೂತ್ ಕ್ಲಬ್ ಪುತ್ತೂರು ಜಂಟಿ ಆಶ್ರಯದಲ್ಲಿ ಪುತ್ತೂರಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಆಯೋಜಿಸಿಕೊಂಡಿದೆ. ಆದರೆ ಪ್ರಪಂಚದಾದ್ಯಂತ ಹಬ್ಬಿರುವ ಮಹಾಮಾರಿ ಕೊರೋನಾ ವೈರಸ್‌ನಿಂದ ಇತರ ರಾಜ್ಯಗಳ ತಂಡಗಳನ್ನು ಪಂದ್ಯಾಟದಲ್ಲಿ ಭಾಗವಹಿಸಲು ಆಯಾ ರಾಜ್ಯ ಸರಕಾರಗಳು ಅವಕಾಶ ನೀಡದೇ ಇರುವುದರಿಂದ ಪಂದ್ಯಾಟವನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ. ಪಂದ್ಯಾಟ ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ. ಪಂದ್ಯಾಟ ನಡೆಸುವ ದಿನಾಂಕ ಮಾತ್ರವೇ ಬದಲಾಗಿದ್ದು ಈ ಹಿಂದೆ ನಿರ್ದರಿಸದಂತೆ ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಲ್ಲದೆ ಈ ಹಿಂದ ನಿಗದಿಪಡಿಸಿದ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಲಿದೆ ಎಂದು ಅವರು ಹೇಳಿದರು.

ವಾಲಿಬಾಲ್ ಎಸೋಸಿಯೇಶನ್ ಅಧ್ಯಕ್ಷ ಬೇಬಿಜಾನ್, ಕಾರ್ಯದರ್ಶಿ ಮೋನಪ್ಪ ಪಟ್ಟೆ, ಖಜಾಂಚಿ ಪ್ರದೀಪ್, ಸೆವೆನ್ ಡೈಮಂಡ್ಸ್ ಯೂತ್ ಕ್ಲಬ್‌ನ ಅಧ್ಯಕ್ಷ ಶಿವರಾಮ ಭಟ್ ಬೀರ್ನಕಜೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.