ಬೊಳುವಾರು ಬೈಲು ಗುಡ್ಡೆಗೆ ಬೆಂಕಿ ಪ್ರಾಣ ರಕ್ಷಣೆಗಾಗಿ ಮರ ಏರಿದ ಹೆಬ್ಬಾವು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೊಳುವಾರು ಬೈಲು ಗುಡ್ಡೆಗೆ ಬೆಂಕಿ ಹತ್ತಿಕೊಂಡ ಘಟನೆ ಮಾ.13ರಂದು ನಡೆದಿದ್ದು, ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ನಡುವೆ ಹೆಬ್ಬಾವೊಂದು ಮರ ಏರಿ ತನ್ನ ಪ್ರಾಣ ರಕ್ಷಣೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಪುತ್ತೂರು ನಗರಸಭೆ ವ್ಯಾಪ್ತಿಯ ಬೊಳುವಾರು ಬೈಲು ಎಂಬಲ್ಲಿ ಗುಡ್ಡೆಗೆ ಹತ್ತಿಕೊಂಡ ಬೆಂಕಿಯ ಜ್ವಾಲೆ ಏರುತ್ತಿದ್ದಂತೆ ಸ್ಥಳೀಯರು ಬಂದು ಬೆಂಕಿ ನಂದಿಸುವಲ್ಲಿ ಯತ್ನಿಸಿದರು. ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಅವರು ಅಗ್ನಿಶಾಮಕ ದಳಕ್ಕೆ ಫೋನ್ ಮಾಡಿದ್ದರು. ತಕ್ಷಣ ಕಾರ್ಯಪ್ರವೃತರಾದ ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿಯ ಕೆನ್ನಾಲೆಯಿಂದ ತನ್ನ ಪ್ರಾಣ ರಕ್ಷಣೆ ಮಾಡಲೆಂದು ಹೆಬ್ಬಾವೊಂದು ಮರ ಏರಿದ್ದ ಘಟನೆಯೂ ಇದೇ ವೇಳೆ ಬೆಳಕಿಗೆ ಬಂದಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.