6 ವರ್ಷಗಳ ಹಿಂದೆ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಅಬ್ದುಲ್ ಸಮದ್ ಮೇಲಿನ ಆರೋಪ ಸಾಬೀತು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: 6 ವರ್ಷಗಳ ಹಿಂದೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪ ಸಾಬೀತಾಗಿದೆ ಎಂದು ಪುತ್ತೂರು ನ್ಯಾಯಾಲಯ ತೀರ್ಪು ನೀಡಿದೆ.

ಬೆಳ್ತಂಗಡಿ ಬಾರ್ಯ ಗ್ರಾಮದ ಸರಳಿಕಟ್ಟೆ ನಿವಾಸಿ ಆದಂ ಅವರ ಪುತ್ರ ಅಬ್ದುಲ್‌ಸಮದ್ ಆರೋಪಿ. 2014ರ ಆ.2ರಂದು ಶಾಂತಿನಗರ ನಿವಾಸಿ ಮಹಿಳೆಯೊಬ್ಬರು ಮನೆಗೆ ಹೋಗಲು ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಅಬ್ದುಲ್ ಸಮದ್ ಅವರು ಆಕೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಕುರಿತು ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಸೆಕ್ಷನ್ 354 ಎ (1)ಯಡಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಹಿರಿಯ ಸಿವಿಲ್ ನ್ಯಾಯಾಧೀಶ ಮಂಜುನಾಥ್ ಅವರು ಆರೋಪಿ ಮೇಲಿನ ಆರೋಪ ಸಾಬೀತಾಗಿರುವುದಾಗಿ ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರ ಸಹಾಯಕ ಸರಕಾರಿ ಅಭಿಯೋಜಕ ದೇವೇಂದ್ರ ಅವರು ವಾದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.