ಕೊರೊನಾ ರೋಗದ ಶಮನಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ವಿಶೇಷ ಪ್ರಾರ್ಥನೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಜಗತ್ತಿನಾದ್ಯಂತ ಹರಡುತ್ತಿರುವ ಕೊರೊನಾ ರೋಗದ ಶಮನಕ್ಕಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಮಾ.16ರಂದು ಬೆಳಿಗ್ಗೆ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಮಾಡಲಾಯಿತು.

ಕೊರೊನಾ ವೈರಸ್ ವೈದ್ಯಕೀಯ ಲೋಕಕ್ಕೆ ಸವಾಲಾಗಿದ್ದು ಇದೀಗ ದೇವರ ಮೊರೆ ಹೋಗುವುದು ಅಗತ್ಯ ಎಂಬ ನೆಲೆಯಲ್ಲಿ ಗಣೇಶೋತ್ಸವ ಸಮಿತಿಯಿಂದ ವಿಶೇಷ ಪ್ರಾರ್ಥನೆಯು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಎಮ್.ಕೆ.ಪ್ರಸಾದ್, ಅಧ್ಯಕ್ಷ ಶಶಾಂಕ ಕೊಟೇಚಾ, ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಅವರ ನೇತೃತ್ವದಲ್ಲಿ ಪ್ರಾರ್ಥನೆ ನಡೆಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಕೋಶಾಧಿಕಾರಿ ಶ್ರೀನಿವಾಸ್, ಖಜಾಂಜಿ ನೀಲಂತ್, ಅಶೋಕ್ ಕುಂಬ್ಳೆ, ದಯಾನಂದ ಪಿ, ಉದಯ ಕುಮಾರ್ ಹೆಚ್, ನಗರಸಭಾ ಸದಸ್ಯ ಮನೋಹರ್ ಕಲ್ಲಾರೆ, ಕೆದಂಬಾಡಿ ಗ್ರಾ.ಪಂ ಅಧ್ಯಕ್ಷ ಪ್ರವೀಣ್ ಕುಮಾರ್ ರೈ, ನಿತ್ಯ ಕರಸೇವಕ ಕಿರಣ್‌ಶಂಕರ ಮಲ್ಯ ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.