‘ಈ ಸರಕಾರಕ್ಕೆ ಯಾರಾದರೂ ಬುದ್ಧಿ ಹೇಳಿ’ ಕೊರೊನಾ ಭೀತಿಗೆ ಸರಕಾರದ ತೀರ್ಮಾನ ವಿರುದ್ಧ ಡಾ.ಕಕ್ಕಿಲ್ಲಾಯ ಅಸಮಾಧಾನ

Puttur_Advt_NewsUnder_1
Puttur_Advt_NewsUnder_1

ಮಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾಲ್, ಥಿಯೇಟರ್, ಸಭೆ ಸಮಾರಂಭಗಳಿಗೆ ಜನ ಸೇರದಂತೆ ನಿರ್ಬಂಧಿಸಿದ ಕ್ರಮದ ಬಗ್ಗೆ ಖ್ಯಾತ ವೈದ್ಯ, ಪ್ರಗತಿಪರ ಚಿಂತಕ ಡಾ.ಶ್ರೀನಿವಾಸ ಕಕ್ಕಿಲ್ಲಾಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

` ಈ ಸರಕಾರಕ್ಕೆ ಯಾರಾದರೂ ಬುದ್ಧಿ ಹೇಳಿ ಅಥವಾ ಈ ಮಾಲ್, ಸಿನಿಮಾ ಮಾಲಕರು, ಮದುವೆ ಏರ್ಪಡಿಸಿದವರು ಬೀದಿಗೆ ಬಂದು ಪ್ರತಿಭಟಿಸಿ. ಇದು ಯಾವ ಉಪಯೋಗಕ್ಕೂ ಇಲ್ಲದ ಮೂರ್ಖತನದ ನಿರ್ಧಾರ’ ಎಂದಿದ್ದಾರೆ.

ತನ್ನ ಫೇಸ್ಬುಕ್ ಖಾತೆಯಲ್ಲಿ ಬರೆದಿರುವ ಕಕ್ಕಿಲ್ಲಾಯ ` ಕೊರೊನಾ ಹರಡಿಯಾಗಿದೆ, ಭಾರತಕ್ಕೆ ಬಂದಾಗಿದೆ, ಶತಮಾನಗಳ ಕಾಲ ಉಳಿಯಲಿದೆ. ಅದು ಹರಡುವುದನ್ನು ತಡೆಯಲು ಸಾಧ್ಯವಿಲ್ಲ. ಶೇಕಡಾ ೭೦ ಸೋಂಕಿತರಲ್ಲಿ, ಅದರಲ್ಲೂ ಮಕ್ಕಳು ಮತ್ತು ಕಿರಿ ವಯಸ್ಕರಲ್ಲಿ ಯಾವ ರೋಗ ಲಕ್ಷಣಗಳೂ ಇಲ್ಲದೆ ಅಥವಾ ಅತ್ಯಲ್ಪ ನೆಗಡಿ, ಕೆಮ್ಮು ಉಂಟಾಗಿ ಅದು ಹೋಗಿಬಿಡುತ್ತದೆ. ೬೦ಕ್ಕೆ ಮೇಲ್ಪಟ್ಟವರಲ್ಲಿ, ಒಟ್ಟಾರೆಯಾಗಿ ಶೇಕಡಾ ೧೫ರಷ್ಟು ಸೋಂಕಿತರಲ್ಲಿ, ಶ್ವಾಸಾಂಗಕ್ಕೆ ಸಮಸ್ಯೆಯುಂಟಾಗಿ ಉಸಿರಾಡಲು ಕಷ್ಟವೆನಿಸಬಹುದು, ಅನಂತರವಷ್ಟೇ ಆಸ್ಪತ್ರೆಗೆ ಬಂದರೆ ಸಾಕು. ಅವರಲ್ಲೂ ಹೆಚ್ಚಿನವರಿಗೆ ಕೇವಲ ಆಮ್ಲಜನಕ ಕೊಟ್ಟರೆ ಸಾಕಾಗುತ್ತದೆ. ಶೇಕಡಾ ೫ ರಷ್ಟು ಸೋಂಕಿತರಿಗಷ್ಟೇ ಕೃತಕ ಉಸಿರಾಟದ ಅಗತ್ಯ ಬರಬಹುದು, ಅವರಲ್ಲೂ ಹಲವರು ಗುಣಮುಖರಾಗುತ್ತಾರೆ.’ ಎಂದು ತಿಳಿಸಿದ್ದಾರೆ. `ಮಾಲ್, ಮದುವೆ ಹಾಲ್ ಮುಚ್ಚಬೇಡಿ. ಈ ಹಿರಿವಯಸ್ಕರು, ಅದಾಗಲೇ ಶ್ವಾಸಕೋಶದ ಸಮಸ್ಯೆಯುಳ್ಳವರು ಅತ್ತ ಹೋಗದಂತೆ ಹೇಳಿ, ಸಾಕು, ಉಸಿರಾಟದ ಸಮಸ್ಯೆಯಾದವರು ಕೂಡಲೇ ಆಸ್ಪತ್ರೆಗೆ ಹೋಗಿ, ತೀವ್ರ ಉಸಿರಾಟದ ಸಮಸ್ಯೆಯಿದ್ದವರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡಿ, ಮೂಗಿನ ತುದಿಗೆ ನೆಗಡಿಯಾದದಕ್ಕೆ ಕತ್ತನ್ನೇ ಕತ್ತರಿಸಬೇಡಿ’ ಎಂದು ಸರಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.

About The Author

Related posts

1 Comment

  1. Sharad Raj

    Ee jamalke marl sarakarada nirdaravannu gauravisi, idannu doctorgala okkutadinda sarakara keli nirdhara togondide

    Reply

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.