Breaking News

ಪೆರ್ನೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಬ್ರಹ್ಮಕಲಶ: ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಪೆರ್ನೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾ.20ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಪುತ್ತೂರು ವಾಣಿಯನ್ ಗಾಣಿಗ ಸಮಾಜ ಸೇವಾ ಸಂಘದ ವತಿಯಿಂದ ಮಾ.16ರಂದು ಬೆಳಿಗ್ಗೆ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯ ಬಳಿಯಿಂದ ಹಸಿರು ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ನಡೆಯಿತು.

ಕೊರೊನಾ ಭೀತಿಯಿಂದಾಗಿ ಸಾಂಕೇತಿಕವಾಗಿ ನಡೆದ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆಯನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೆದಂಬಾಡಿ ಗ್ರಾ.ಪಂ ಅಧ್ಯಕ್ಷ ಪ್ರವೀಣ್ ರೈ, ವಾಣಿಯನ್ ಗಾಣಿಗ ಸಮಾಜದ ತಾಲೂಕು ಅಧ್ಯಕ್ಷ ತಿಮ್ಮಪ್ಪ ಪಾಟಾಳಿ, ಸಂಚಾಲಕ ದಾಮೋದರ್ ಪಾಟಾಳಿ, ಕಾರ್ಯದರ್ಶಿ ಈಶ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಗೋಪಾಲಕೃಷ್ಣ, ಚಂದ್ರಶೇಖರ್, ಪಟ್ಟಿಕಾರರಾದ ರಾಧಾಕೃಷ್ಣ ಬಡಕಾಯೂರು, ಶಶಿಧರ್ ನೇರ್ಲ, ಮಾಧವ ಸರ್ವೆ, ನಿವೃತ್ತ ಉಪವಲಯ ಅರಣ್ಯಾಧಿಕಾರಿ ಕೃಷ್ಣಪ್ಪ ಕೆ, ಗಣೇಶೋತ್ಸವ ಸಮಿತಿಯ ಪುರುಷೋತ್ತಮ ಕೋಲ್ಪೆ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.