ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಸಿಆರ್‌ಪಿಸಿ ಸೆಕ್ಷನ್ 144(3): ಜಿಲ್ಲೆಯಾದ್ಯಂತ ಕಾರ್ಯಕ್ರಮಗಳಿಗೆ ನಿರ್ಬಂಧಕಾಜ್ಞೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೊನಾ ವೈರಾಣು ಕಾಯಿಲೆ-೨೦೧೯ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರದ ಆದೇಶದಂತೆ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ ಸೆಕ್ಷನ್ 144(3)ರ ಅಡಿ ಕಾರ್ಯಕ್ರಮಗಳಿಗೆ ನಿರ್ಬಂಧಕಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ಆದೇಶ ಹೊರಡಿಸಿದ್ದಾರೆ.

ಕೋವಿಡ್-2019 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜರುಗುವ ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೆ ಸೇರಿದ ಜಾತ್ರೆಗಳು, ಸಭೆ ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತೆ, ಜಾತ್ರೆ, ಉತ್ಸವ, ಸಾಮೂಹಿಕ ವಿವಾಹ ಹಾಗೂ ಇನ್ನಿತರ ಜನಸಂದಣಿ ಸೇರುವ ಕಾರ್ಯಕ್ರಮಗಳಿಂದ ಸೋಂಕು ಹರಡುವ ಸಾಧ್ಯತೆ ಇರುವ ಕಾರಣದಿಂದ ಸರಕಾರದ ಆದೇಶದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಮಾ.17ರಿಂದ ಮುಂದಿನ ಆದೇಶದ ತನಕ ನಿರ್ಬಂಧಾಜ್ಞೆ ವಿಧಿಸಲಾಗಿದೆ.

ಈ ಅವಧಿಯಲ್ಲಿ…..
1.ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ನಡೆಯುವ ಉತ್ಸವ ಜಾತ್ರೆಗಳಲ್ಲಿ ಕೇವಲ ದೇವಸ್ಥಾನಗಳ ಸಿಬಂದಿ ಮಾತ್ರ ಭಾಗವಹಿಸುವಂತೆ ಸೂಚಿಸಿದೆ.ಉತ್ಸವಗಳಲ್ಲಿ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದೆ.
2.ದೇವಸ್ಥಾನಗಳಲ್ಲಿ ಕೇವಲ ದೇವರ ದರ್ಶನವನ್ನು ಹೊರತು ಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ರದ್ದು ಪಡಿಸಿದೆ ಹಾಗೂ ದೇವಸ್ಥಾನಗಳಿಗೆ ಬರುವ ಸಾರ್ವಜನಿಕರಿಗೆ ತಂಗಲು ಅವಕಾಶ ಇರುವುದಿಲ್ಲ.
3.ದೇವಸ್ಥಾನ, ಮಸೀದಿ, ಚರ್ಚ್ ಒಳಗೊಂಡಿರುವಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಗುಂಪು ಗುಂಪಾಗಿ ಸಾರ್ವಜನಿಕರು ಪ್ರವೇಶಿಸಬಾರದೆಂದು ಸೂಚಿಸಿದೆ.
4.ಬೇಸಿಗೆ ಶಿಬಿರ, ಸಮಾರಂಭಗಳು, ವಿಚಾರ ಸಂಕಿರಣಗಳು ಮತ್ತಿತರ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸದಂತೆ ಆದೇಶಿಸಿದೆ.
5.ಬೀಚ್‌ಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ.
6.ಮದುವೆ ಸಮಾರಂಭಗಳನ್ನು ಹೆಚ್ಚಿನ ಜನಸಂದಣಿ ಸೇರದಂತೆ ಸರಳವಾಗಿ ಆಯೋಜಿಸಲು ಸೂಚಿಸಿದೆ.

ಪಿ.ಜಿ ಮತ್ತು ವಸತಿ ನಿಲಯಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳು:
1.ಪಿ.ಜಿ ಮತ್ತು ವಸತಿ ನಿಲಯಗಳಲ್ಲಿ ವಾಸಿಸುವ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ತಮ್ಮ ಶಿಕ್ಷಣ ಸಂಸ್ಥೆಗಳು ಕೋವಿಡ್-೧೯ರ ಹಿನ್ನಲೆಯಲ್ಲಿ ರಜೆ ಘೋಷಿಸಿದ್ದಲ್ಲಿ ತಮ್ಮ ತಮ್ಮ ಮನೆಗಳಿಗೆ ವಾಪಾಸು ಹೋಗಲು ಸಲಹೆ ನೀಡುವುದು.
2.ಒಂದು ವೇಳೆ ಯಾರಾದರೂ ಪಿ.ಜಿ ಮತ್ತು ವಸತಿ ನಿಲಯಗಳಲ್ಲಿ ಉಳಿದುಕೊಳ್ಳಲು ಬಯಸಿದಲ್ಲಿ ಅಂತಹವರಿಗೆ ಪಿಜಿ ಮತ್ತು ವಸತಿ ನಿಲಯಗಳ ಮಾಲಕರು/ವ್ಯವಸ್ಥಾಪಕರು ಕರ್ನಾಟಕ ಸರಕಾರವು ನೀಡಿರುವ ಸಲಹೆಗಳಂತೆ ವೈಯುಕ್ತಿಕ ಸ್ವಚ್ಛತೆಗಳ ಬಗ್ಗೆ ಮನವರಿಕೆ ಮಾಡಿಕೊಡತಕ್ಕದ್ದು.
3.ನಿಯತಕಾಲಿಕವಾಗಿ ಪಿಜಿ ವಸತಿ ನಿಲಯಗಳಲ್ಲಿ ನೈರ್ಮಲ್ಯತೆ ಮತ್ತು ಸ್ವಚ್ಛತೆಯನ್ನು ಕಾಪಾಡುವುದು ಪಿ.ಜಿ, ವಸತಿ ನಿಲಯಗಳ/ಮಾಲಿಕರ /ವ್ಯವಸ್ಥಾಪಕರ ಜವಾಬ್ದಾರಿಯಾಗಿದೆ.
4.ಪಿ.ಜಿ ವಸತಿ ನಿಲಯಗಳಲ್ಲಿ ವಾಸಿಸುವವರಿಗೆ ಅನಾನುಕೂಲವಾಗದಂತೆ ಹಾಗೂ ಯಾವುದೇ ಸೋಂಕು ಹರಡದಂತೆ ಕೋಣೆಗಳಲ್ಲಿ ಜನದಟ್ಟಣೆಯನ್ನು ಕಡ್ಡಾಯವಾಗಿ ನಿರ್ಬಂಧಿಸಿದೆ.
5.ಪಿಜಿ/ವಸತಿ ನಿಲಯಗಳ ಆವರಣಗಳಲ್ಲಿ ನೈರ್ಮಲ್ಯತೆ ಮತ್ತು ಸ್ವಚ್ಛತೆಯನ್ನು ಕಾಪಾಡಲು ನೀಡಲಾದ ನಿರ್ದೇಶನಗಳನ್ನು ಅನುಸರಿಸದೇ ಕೋವಿಡ್ -೧೯ ಹರಡಲು ಕಾರಣಕರ್ತರಾದವರ ವಿರುದ್ಧ ಕಠಿಣ ಕ್ರಮಗಳನ್ನು ಜರಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.