Breaking News

ತಿಂಗಳಾಡಿ ದೇವಗಿರಿ ಶ್ರೀ ದೇವತಾ ಭಜನಾ ಮಂದಿರದ 25ನೇ ಪ್ರತಿಷ್ಠಾ ಮಂಗಲೋತ್ಸವ

Puttur_Advt_NewsUnder_1
Puttur_Advt_NewsUnder_1
  • ಶ್ರೀ ದೇವಿ ಮಹಾತ್ಮೆ ಯಕ್ಷಗಾನ, ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ

 

ಪುತ್ತೂರು: ಕೆದಂಬಾಡಿ ಗ್ರಾಮದ ತಿಂಗಳಾಡಿ ಶ್ರೀ ದೇವತಾ ಸಮಿತಿ ಶ್ರೀ ಕ್ಷೇತ್ರ ದೇವಗಿರಿಯ ಶ್ರೀ ದೇವತಾ ಭಜನಾ ಮಂದಿರದ 25 ನೇ ಪ್ರತಿಷ್ಠಾ ಮಂಗಲೋತ್ಸವವು ಮಾ.17 ರಂದು ವಿಜೃಂಭಣೆಯಿಂದ ನಡೆಯಿತು. ಪ್ರತಿಷ್ಠಾ ಮಂಗಲೋತ್ಸವದ ಪ್ರಯುಕ್ತ ಸಂಜೆ ಸ್ಥಳ ಸಾನಿಧ್ಯ ದೈವಗಳಿಗೆ ತಂಬಿಲ ಸೇವೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ರಾತ್ರಿ ಕುಂಬ್ರ ಶ್ರೀರಾಮಗಿರಿಯ ಶ್ರೀ ರಾಮ ಮಹಿಳಾ ಭಜನಾ ತಂಡದವರಿಂದ ಭಜನಾ ಸೇವೆ ನಡೆಯಿತು.

ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸೇವಾ ಸಮಿತಿ ಶ್ರೀ ಕ್ಷೇತ್ರ ದೇವಗಿರಿ ತಿಂಗಳಾಡಿ ಇವರ ಸೇವಾರ್ಥವಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಕಟೀಲು ಇವರಿಂದ ರಾತ್ರಿ ` ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ನಡೆಯಿತು. ಶ್ರೀ ದೇವಿಗೆ ಮಹಾಪೂಜೆ, ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆದು ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಿತು. ನೂರಾರು ಮಂದಿ ಯಕ್ಷಗಾನ ಬಯಲಾಟ ವೀಕ್ಷಿಸಿದರು. ಊರ ಪರವೂರ ಸಾವಿರಕ್ಕೂ ಅಧಿಕ ಮಂದಿಗೆ ಅನ್ನಪ್ರಸಾದ ಸ್ವೀಕರಿಸಿದರು. ಸಮಿತಿಯ ವಿವಿಧ ಪದಾಧಿಕಾರಿಗಳು ಭಕ್ತಾಧಿಗಳನ್ನು ಸ್ವಾಗತಿಸಿ, ಪ್ರಸಾದ ನೀಡಿ ಸತ್ಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.