Breaking News

ಕಲಾಭೂಷಣ್ ರಾಜ್ಯ ಪ್ರಶಸ್ತಿಗೆ ಶರಧಿ ಕಡಮಾಜೆ ಆಯ್ಕೆ

Puttur_Advt_NewsUnder_1
Puttur_Advt_NewsUnder_1
ನಿಡ್ಪಳ್ಳಿ: ಗಡಿನಾಡ ಧ್ವನಿ, ಗಡಿನಾಡ ಶ್ರೇಯೋಭಿವೃದ್ದಿ ಟ್ರಸ್ಟ್ ಇವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮತ್ತು ಕೊಡುಗೆ ನೀಡಿದವರಿಗೆ ನೀಡುವ ಕಲಾ ಭೂಷಣ್ ರಾಜ್ಯ ಪ್ರಶಸ್ತಿಗೆ ಕು. ಶರಧಿ ಕಡಮಾಜೆ  ಆಯ್ಕೆಯಾಗಿದ್ದಾರೆ.ಪ್ರಶಸ್ತಿಯನ್ನು ಏ.4 ರಂದು ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದ ಸಭಾಭಾವನದಲ್ಲಿ ನೀಡಲಾಗುವುದು.
ಇವರು ಭರತನಾಟ್ಯ ಜೂನಿಯರ್ ವಿಭಾಗದಲ್ಲಿ ಡಿಸ್ಟಿಂಕ್ಷನ್,  ಭರತನಾಟ್ಯ ಸೀನಿಯರ್  ವಿಭಾಗದಲ್ಲಿ  ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ಅಲ್ಲದೇ ಸುಮಾರು ನೂರು ವೇದಿಕೆಯಲ್ಲಿ ಭರತನಾಟ್ಯ ಕಾರ್ಯಕ್ರಮ ಪ್ರದರ್ಶನ ನೀಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಇವರು ಪುತ್ತೂರು ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿ.ಯು.ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು  ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದಾರೆ.ಇವರು ಅರುಣಾ ಮತ್ತು ಶ್ರೀಧರ ಬೊಳಿಲ್ಲಾಯ ಕಡಮಾಜೆ ಪಾಣಾಜೆ ಇವರ ಪುತ್ರಿ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.