ದ.ಕ.-ಕಾಸರಗೋಡು ಗಡಿ ಭಾಗದಲ್ಲಿ ಮಾ.21ರಿಂದ ವಾಹನ ಸಂಚಾರ ನಿಷೇಧ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಮತ್ತು ಕೇರಳ ರಾಜ್ಯದ ಕಾಸರಗೋಡು ಗಡಿಭಾಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶಿಸಿದ್ದಾರೆ.

ಮಾ.21ರ ಮಧ್ಯಾಹ್ನ 2 ಗಂಟೆಯಿಂದ ಮಾ.23ರ ಮಧ್ಯರಾತ್ರಿ 12 ಗಂಟೆ ತನಕ ದ.ಕ.ಮತ್ತು ಕಾಸರಗೋಡು ಗಡಿ ಭಾಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.ಯಾವುದೇ ತುರ್ತು ಪ್ರಕರಣಗಳಲ್ಲಿ ತಲಪಾಡಿ ಚೆಕ್‌ಪೋಸ್ಟ್ ಮೂಲಕ ಮಾತ್ರ ಅವಕಾಶ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ದ.ಕ.ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ.ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಕೈಗೊಳ್ಳುವ ಅಗತ್ಯತೆ ಇದೆ.ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಈಗಾಗಲೇ ಕೊರೋನಾದ 6 ಪ್ರಕರಣಗಳು ವೈದ್ಯಕೀಯ ತಪಾಸಣೆಯಿಂದ ವರದಿಯಾಗಿರುತ್ತದೆ. ಕಾಸರಗೋಡು ಮತ್ತು ಮಂಗಳೂರು ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ತಮ್ಮ ದೈನಂದಿನ ಕಾರ್ಯಗಳಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಗಡಿಭಾಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.