ಕೊರೊನಾ ಹಿನ್ನೆಲೆ: ಮಾ.23-31ರ ತನಕ ಮಂಗಳೂರು ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು

Puttur_Advt_NewsUnder_1
Puttur_Advt_NewsUnder_1

ಮಂಗಳೂರು: ಕೊರೊನಾ ವೈರಸ್ ಕಾಯಿಲೆ (ಕೋವಿಡ್-19) ಆತಂಕದ ಹಿನ್ನೆಲೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್‌ನಿಂದ ಪತ್ರಿಕಾ ಭವನದಲ್ಲಿ ನಡೆಸುವ ಪತ್ರಿಕಾಗೋಷ್ಠಿಗಳನ್ನು ಮಾ. 23ರಿಂದ ಮಾ. 31ರ ತನಕ ರದ್ದುಪಡಿಸಲಾಗಿದೆ.

ನೆರೆಯ ಕಾಸರಗೋಡು, ಕೊಡಗು ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಈಗಾಗಲೇ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಪ್ರೆಸ್‌ಕ್ಲಬ್ ಕೂಡ ಹಲವು‌ ಮಂದಿ ಸೇರುವ ಜಾಗವಾದ ಕಾರಣ, ಪತ್ರಕರ್ತರ ಆರೋಗ್ಯದ ದೃಷ್ಠಿಯಿಂದ ಈ ಅನಿವಾರ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮಾ.31ರ ನಂತರ ಪರಿಸ್ಥಿತಿ ಅವಲೋಕಿಸಿ, ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.

ಪತ್ರಕರ್ತರು ಸುದ್ದಿ ಮಾಡುವ ಧಾವಂತದಲ್ಲಿ ಸರಕಾರ ನೀಡಿರುವ ಎಚ್ಚರಿಕೆ ಕ್ರಮಗಳನ್ನು ಮರೆಯಬಾರದು. ಜನಜಂಗುಳಿ ಇರುವ ಪ್ರದೇಶಗಳಿಗೆ ತೆರಳದೆ, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ತಮ್ಮನ್ನು ಕೊರೊನಾ ವೈರಸ್‌ನಿಂದ ರಕ್ಷಿಸಿಕೊಳ್ಳಲು ಸ್ವಯಂ ಸುರಕ್ಷಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು. ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸುವ ಸಾರ್ವಜನಿಕರು ತಮಗೆ ಆಗುವ ಅನಾನುಕೂಲಕ್ಕಾಗಿ ಸಹಕರಿಸಬೇಕು ಎಂದು ಮಂಗಳೂರು ಪ್ರೆಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಆರಿಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.