ಕುಂಡಾಜೆ: ಸೇತುವೆಯಡಿ ಕೋಳಿತ್ಯಾಜ್ಯ ಎಸೆತ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಗ್ರಾಮಸ್ಥರಿಂದ ಡಿಸಿಗೆ ಮನವಿ

Puttur_Advt_NewsUnder_1
Puttur_Advt_NewsUnder_1


ರಾಮಕುಂಜ: ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕುಂಡಾಜೆ ಎಂಬಲ್ಲಿರುವ ಕಿರುಸೇತುವೆಯಡಿಗೆ ಕೋಳಿತ್ಯಾಜ್ಯ ಹಾಗೂ ಇನ್ನಿತರ ತ್ಯಾಜ್ಯ ಎಸೆಯಲಾಗುತ್ತಿದ್ದು ಇದರಿಂದಾಗಿ ಪರಿಸರದಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಇದೆ. ಆದ್ದರಿಂದ ಇಲ್ಲಿ ತ್ಯಾಜ್ಯ ಎಸೆಯುವವರನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸ್ಥಳೀಯ ಗ್ರಾಮಸ್ಥರು ದ.ಕ.ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದಾರೆ.

 ರಾಮಕುಂಜ ಗ್ರಾ.ಪಂ.ವ್ಯಾಪ್ತಿಗೆ ಬರುವ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕುಂಡಾಜೆ ಎಂಬಲ್ಲಿರುವ ಕಿರುಸೇತುವೆಯ ಅಡಿಗೆ ಕೋಳಿತ್ಯಾಜ್ಯ ಹಾಗೂ ಇನ್ನಿತರ ತ್ಯಾಜ್ಯ ತಂದು ಎಸೆಯಲಾಗುತ್ತಿದೆ. ಈ ಕಿರು ಹೊಳೆಯ ನೀರು ನಡ್ಜೀರು, ನೇಲಡ್ಕ ಹಾಗೂ ಇನ್ನಿತರ ಕಡೆಗಳಿಗೆ ಹರಿದು ಹೋಗಿ ಕುಮಾರಧಾರ ನದಿ ಸೇರುತ್ತಿದೆ. ರಾತ್ರೋ ರಾತ್ರಿ ಇಲ್ಲಿ ಕೋಳಿ ತ್ಯಾಜ್ಯ ಹಾಗೂ ಇನ್ನಿತರ ತ್ಯಾಜ್ಯ ತಂದು ಎಸೆಯಲಾಗುತ್ತಿದೆ. ಇದು ಈಗ ಗಬ್ಬು ವಾಸನೆ ಬರುತ್ತಿದೆ. ತ್ಯಾಜ್ಯಗಳನ್ನು ನಾಯಿ ಸೇರಿದಂತೆ ಇತರೇ ಪ್ರಾಣಿ, ಪಕ್ಷಿಗಳು ಎಳೆದುಕೊಂಡು ತಂದು ರಸ್ತೆಗೆ ಹಾಕುತ್ತಿವೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿಯೂ ಇದೆ. ಆದ್ದರಿಂದ ಸಂಬಂಧ ಪಟ್ಟ ಇಲಾಖೆಯವರು ಈ ತ್ಯಾಜ್ಯವನ್ನು ವಿಲೇವಾರಿ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೇ ಮುಂದೆ ಇಲ್ಲಿ ತ್ಯಾಜ್ಯ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಕಡಬ ಆರಕ್ಷಕ ಠಾಣೆ, ರಾಮಕುಂಜ ಗ್ರಾ.ಪಂ., ಆರೋಗ್ಯಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿದೆ. ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಸದಾಶಿವ ಶೆಟ್ಟಿ ಮಾರಂಗರವರ ನೇತೃತ್ವದಲ್ಲಿ ಗ್ರಾಮಸ್ಥರಾದ ಇಬ್ರಾಹಿಂ ಕುಂಡಾಜೆ, ಉಮೇಶ್ ಶೆಟ್ಟಿ ಕುಂಡಾಜೆ, ಹರೀಶ್ ಭಂಡಾರಿ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.