ಕೊರೋನಾ: ಮುಖ್ಯಮಂತ್ರಿ ತುರ್ತು ಸಭೆ – ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡಿಕೆ ರಾಜ್ಯದ ಎಲ್ಲ ಗಡಿ ಬಂದ್ ಗೆ ತೀರ್ಮಾನ

Puttur_Advt_NewsUnder_1
Puttur_Advt_NewsUnder_1

ಬೆಂಗಳೂರು: ರಾಜ್ಯದಲ್ಲೂ ತನ್ನ ಕರಾಳ ಹಸ್ತ ಚಾಚಲು ಮುಂದಾಗುತ್ತಿರುವ ಕೊರೋನಾ ವೈರಸನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಮಾ.22ರಂದು ಬೆಳಿಗ್ಗೆ 6 ಗಂಟೆಗೆ ಸಿಎಂ ಯಡಿಯೂರಪ್ಪ ಅವರು ತುರ್ತು ಸಭೆ ನಡೆಸಿದರು. ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಹಾಗೂ ಟಾಸ್ಕ್ ಫೋರ್ಸ್ ನ ಸಚಿವರೊಂದಿಗೆ ಸಭೆಯಲ್ಲಿ ಚರ್ಚಿಸಿ ಕೆಲ ನಿರ್ಣಯಗಳನ್ನು ಕೈಗೊಳ್ಳಲಾಯಿತು.
 • ಸಭೆಯ ಪ್ರಮುಖ ತೀರ್ಮಾನಗಳು:
 • ಮುಂದಿನ ಆದೇಶದವರೆಗೆ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ.
 • ರಾಜ್ಯದ ಎಲ್ಲಾ ಗಡಿ ಭಾಗ ಬಂದ್ ಮಾಡಲು ತೀರ್ಮಾನ.
 • 1700 ಹಾಸಿಗೆಯ ವಿಕ್ಟೋರಿಯಾ ಆಸ್ಪತ್ರೆಯನ್ನು ಕೊರೋನಾ ಗೆ ಮಾತ್ರ ಪರಿವರ್ತಿಸಲು ತೀರ್ಮಾನ.
 • ಐಸಿಎಂಆರ್ ಮತ್ತು ಎನ್ಐವಿ ಸಹಕಾರದೊಂದಿಗೆ ಸರಕಾರಿ ಮತ್ತು ಸರಕಾರೇತರ ಆಸ್ಪತ್ರೆಗಳಿಗೂ ಕೋವಿಡ್ ತಪಾಸಣೆಗೆ ಪರವಾನಿಗೆ ಕೊಡಿಸಲು ಕ್ರಮ.
 • ಲ್ಯಾಬ್ ಟೆಸ್ಟ್ ಗಳ ಪ್ರಮಾಣ ಹೆಚ್ಚಿಸಲು ಕ್ರಮ.
 • ಸ್ಥಳೀಯ ವಿಮಾನ ಪ್ರಯಾಣಿಕರಿಗೂ ತಪಾಸಣೆ ಕಡ್ಡಾಯಗೊಳ್ಳಲು ತೀರ್ಮಾನ.
 • ಎಲ್ಲಾ ಚುನಾವಣೆಗಳ ಮುಂದೂಡಿಕೆ.
 • ಬಾಲ್ ಬ್ರೂಯಿ ಅತಿಥಿ ಗೃಹವನ್ನು ಕೊರೊನಾ ವಾರ್ ರೂಂ ಆಗಿ ಪರಿವರ್ತನೆ.
 • ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ  ಎಲ್ಲಾ ಕಾರ್ಯಗಳು ನಡೆಯಲಿವೆ.
 • ಎರಡು ತಿಂಗಳ ಪಡಿತರ ಒದಗಿಸಲು ಕ್ರಮ.
 • ಮುಂದಿನ 15 ದಿನ ನಗರದಿಂದ ಯಾರು ಹಳ್ಳಿಗಳಿಗೆ ಹೋಗದಂತೆ ಮುಖ್ಯಮಂತ್ರಿಗಳ ಮನವಿ.
 • ಜೀವನಾವಶ್ಯಕ ವಸ್ತುಗಳ ಕೊರತೆಯಾಗದಂತೆ ಕ್ರಮ.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.