ಮುಂಬಯಿಂದ ಆಗಮಿಸಿದ ಕಲ್ಲಾರೆ ನಿವಾಸಿ ಮನೆಗೆ ಅಧಿಕಾರಿಗಳ ಭೇಟಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮುಂಬಯಿಯಿಂದ ಆಗಮಿಸಿದ ಕಲ್ಲಾರೆ ನಿವಾಸಿಯೊಬ್ಬರ ಮನೆಗೆ ಸಹಾಯಕ ಆಯುಕ್ತರು, ತಹಶೀಲ್ದಾರ್, ತಾಲೂಕು ಆರೋಗ್ಯಾಧಿಕಾರಿ ಹಾಗೂ ನಗರ ಸಭಾ ಆರೋಗ್ಯ ನಿರೀಕ್ಷಕರು ಮಾ.22ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಮುನ್ನೆಚ್ಚರಿಕಾ ಕ್ರಮವಾಗಿ ಹೊಟೇಲ್‌ಗಳನ್ನು ಬಂದ್ ಮಾಡುವಂತೆ ಸರಕಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಂಬಯಿಯ ಹೊಟೇಲೊಂದರಲ್ಲಿ ಉದ್ಯೋಗಿಯಾಗಿರುವ ಕಲ್ಲಾರೆ ನಿವಾಸಿಯೋರ್ವರು ಮಾ.22ರಂದು ಬೆಳಿಗ್ಗೆ ತನ್ನ ಮನೆಗೆ ಆಗಮಿಸಿದ್ದರು. ಮನೆಗೆ ಆಗಮಿಸಿದ್ದ ಅವರು ರಸ್ತೆಯಲ್ಲಿ ನಡೆದಾಡುತ್ತಿರುವುದನ್ನು ಕಂಡ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಕಾಡಿದ್ದು ಅವರು ಸಹಾಯಕ ಆಯುಕ್ತರ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್ ಬಾಬು, ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ, ನಗರ ಸಭಾ ಹಿರಿಯ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ ಹಾಗೂ ಶ್ವೇತಾಕಿರಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಬಯಿಯಲ್ಲಿ ಪರೀಕ್ಷಿಸಿಯೇ ನನ್ನ ಕಳುಹಿಸಿರುವುದಾಗಿ ಅವರು ಅಧಿಕಾರಿಗಳಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.