ಲಾಕ್‌ಡೌನ್‌ಗೆ ಸ್ಪಂದಿಸದಿದ್ದರೆ ಕಾನೂನು ಕ್ರಮ: ಕೇಂದ್ರ

Puttur_Advt_NewsUnder_1
Puttur_Advt_NewsUnder_1
ಬೆಂಗಳೂರು: ಕೊರೊನಾ ವಿರುದ್ಧದ ಸರಕಾರ ಘೋಷಿಸಿರುವ ಲಾಕ್‌ಡೌನ್‌ನ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯಗಳಿಗೆ ಸೂಚನೆ ನೀಡಿರುವ ಕೇಂದ್ರ ಸರ್ಕಾರ, ನಿಯಮಗಳನ್ನು ಪಾಲಿಸದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ದೇಶದ ಹಲವು ನಗರಗಳು ಮತ್ತು 75 ಜಿಲ್ಲೆಗಳನ್ನು ಲಾಕ್‌ಡೌನ್‌ ಮಾಡಲು ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರ ಮಾ.22ರಂದು ನಿರ್ಧರಿಸಿತು. ಅದರಂತೆ ಕರ್ನಾಟಕದ 9 ಜಿಲ್ಲೆಗಳೂ ಸೇರಿ ದೇಶದ 75 ಜಿಲ್ಲೆಗಳನ್ನು ಲಾಕ್‌ಡೌನ್‌ ಮಾಡಲಾಗಿದೆ. 
ಇದರ ಬಗ್ಗೆ ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಲಾಕ್ ಡೌನ್ ಅನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಸಮಾಧಾನ ಹೊರಹಾಕಿದ್ದರು. ಇದನ್ನು ರಾಜ್ಯಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದ್ದರು.
ಲಾಕ್‌ಡೌನ್‌ ಅವಧಿಯಲ್ಲಿ ವೈದ್ಯಕೀಯ, ಔಷಧಿ, ದಿನಸಿ ಮತ್ತಿತರ ಜೀವನಾವಶ್ಯಕ ಅಗತ್ಯ ಸೇವೆಗಳು ಲಭ್ಯವಾಗಲಿವೆ. ಸಾರಿಗೆ ವ್ಯವಸ್ಥೆಗಳಾದ ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿಗಳು ಸಂಚಾರ ಬಂದ್ ಆಗಲಿವೆ. ನೆರೆಯ ರಾಜ್ಯಗಳ ವಾಹನಗಳ ಪ್ರವೇಶಕ್ಕೆ ನಿಷೇಧ ವಿಧಿಸಲಾಗುತ್ತದೆ. ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ ಇನ್ನೆಲ್ಲ ಕಚೇರಿಗಳು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಆದೇಶಿಸಲಾಗುತ್ತದೆ. 
ಕರ್ನಾಟಕದಲ್ಲಿ ಲಾಕ್‌ಡೌನ್‌ ಆದ ಜಿಲ್ಲೆಗಳು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಧಾರವಾಡ, ಮೈಸೂರು, ಕೊಡಗು, ಕಲಬುರ್ಗಿ, ಬೆಳಗಾವಿ, ದಕ್ಷಿಣ ಕನ್ನಡ. 
ದೇಶದಲ್ಲಿ ಲಾಕ್‌ಡೌನ್‌  ಆದ ಮಹಾನಗರಗಳು: ದೆಹಲಿ, ಮುಂಬೈ, ಕೋಲ್ಕತಾ, ಚೆನ್ನೈ, ಬೆಂಗಳೂರು ಸೇರಿ ಈಗಾಗಲೇ ಪ್ರಮುಖ 8 ಮಹಾನಗರಗಳು ಲಾಕ್‌ಡೌನ್‌ ಆಗಿವೆ. ಇದರ ಜೊತೆಗೆ ಮಹಾರಾಷ್ಟ್ರ, ಕೇರಳ, ದೆಹಲಿ, ಗುಜರಾತ್‌, ಉತ್ತರ ಪ್ರದೇಶ, ಹರಿಯಾಣ, ತೆಲಂಗಾಣ, ರಾಜಸ್ಥಾನ, ಆಂಧ್ರಪ್ರದೇಶ, ತಮಿಳುನಾಡು, ಪಂಜಾಬ್‌, ಜಮ್ಮು ಮತ್ತು ಕಾಶ್ಮೀರ, ಲಡಾಕ್‌, ಪಶ್ಚಿಮ ಬಂಗಾಳ, ಚಂಡೀಗಡ, ಚತ್ತೀಸಗಡ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಒಡಿಶಾ, ಪುದುಚೇರಿ, ಉತ್ತರಾಖಂಡದ 75 ಜಿಲ್ಲೆಗಳನ್ನು ಲಾಕ್ ಡೌನ್‌ ಮಾಡಲಾಗಿದೆ. 
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.