ಮಂಗಳೂರು ಪಾಲಿಕೆ ವತಿಯಿಂದ ಸೋಂಕು ನಿವಾರಕ ಸಿಂಪಡನೆ ಕಾರ್ಯಕ್ಕೆ ಚಾಲನೆ

ಸಾಂದರ್ಭಿಕ ಚಿತ್ರ

ಮಂಗಳೂರು: ಕೊರೊನಾ ವೈರಾಣು ಸೋಂಕು ಹರಡದಂತೆ ನೋಡಿಕೊಳ್ಳಲು ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಮಂಗಳೂರು ಮಹಾನಗರಪಾಲಿಕೆಯು ಸೋಂಕು ನಿವಾರಕ ಸಿಂಪಡಿಸುವ ಕಾರ್ಯಕ್ಕೆ ಚಾಲನೆ ನೀಡಿದೆ.

ಮುಖ್ಯರಸ್ತೆಗಳು, ಒಳ ರಸ್ತೆಗಳು, ಪ್ರಯಾಣಿಕರ ತಂಗುದಾಣ, ಬಸ್‌ ನಿಲ್ದಾಣ, ವೃತ್ತಗಳು ಸೇರಿದಂತೆ ಎಲ್ಲ ಸಾರ್ವಜನಿಕ ಪ್ರದೇಶಗಳಲ್ಲೂ ಸೋಂಕು ನಿವಾರಕ ಸಿಂಪಡಣೆ ಮಾಡಲಾಗುವುದು.

ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲವನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕೊರೊನಾ ವೈರಾಣು ಸೋಂಕು ಹರಡದಂತೆ ನೋಡಿಕೊಳ್ಳಲು ಮುಂಜಾಗ್ರತೆಯಾಗಿ ಈ ಕ್ರಮ ವಹಿಸಲಾಗುತ್ತಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.