ಲಾಕ್‌ಡೌನ್ ಪಾಲಿಸದಿದ್ದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋವಿಡ್ -19ವೈರಸ್ ದಿನದಿಂದ ದಿನಕ್ಕೆ ಅತ್ಯಂತ ವೇಗವಾಗಿ ಹರಡುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾ.31ರವರೆಗೆ ಲಾಕ್‌ಡೌನ್ ಆದೇಶ ಮಾಡಲಾಗಿದ್ದು, ಇದನ್ನು ಪಾಲಿಸದಿದ್ದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ತಿಳಿಸಿದ್ದಾರೆ.

ಮಾಧ್ಯಮದ ಹೇಳಿಕೆ ಬಿಡುಗಡೆ ಮಾಡಿದ ಅವರು, ಜಿಲ್ಲೆಯಲ್ಲಿ ಲಾಕ್‌ಡೌನ್ ಮಾಡಿದರೂ ಅಂಗಡಿ ಮುಂಗಟ್ಟು ತೆರೆದಿದೆ. ಜನಸಂಚಾರವೂ ಹೆಚ್ಚಾಗಿದ್ದು ಈ ಬಗ್ಗೆ ದೂರುಗಳು ಬರುತ್ತಿದ್ದು, ಈ ಆದೇಶವನ್ನು ಪ್ರತಿಯೊಬ್ಬರು ಗಂಭೀರವಾಗಿ ಪರಿಗಣಿಸಬೇಕಿದೆ. ಲಾಕ್‌ಡೌನ್ ಒಂದು ದಿನದ ವಿಷಯವಲ್ಲ, ಒಂದು ದಿನ ಕರ್ಫ್ಯೂ ಮಾಡಿದರೆ ಪರಿಹಾರ ಸಾಧ್ಯವಾಗಲ್ಲ. ಸಾಮೂಹಿಕವಾಗಿ ಈ ರೋಗ ಹರಡಲು ಆರಂಭವಾದರೆ ಇದನ್ನು ನಿಯಂತ್ರಣ ಮಾಡಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಇದನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಅನಗತ್ಯವಾಗಿ ಓಡಾಡುವುದನ್ನು ನಿಲ್ಲಿಸಿ, ಅಂಗಡಿ ಮುಂಗಟ್ಟು ಬಂದ್ ಮಾಡಿ ಇಲ್ಲದಿದ್ದರೆ ಕಠಿಣ ಕ್ರಮಕೈಗೊಳ್ಳುವುದು ಅನಿವಾರ್ಯವಾದೀತು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.