ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರ ತನಕ ಅವಶ್ಯಕ ಸೇವೆಗಳ ಅಂಗಡಿಗಳಿಗೆ ಮಾತ್ರ ಅವಕಾಶ

Puttur_Advt_NewsUnder_1
Puttur_Advt_NewsUnder_1
  • ರಿಕ್ಷಾ ಸಹಿತ ಟೂರಿಸ್ಟ್ ವಾಹನಗಳ ಓಡಾಟಕ್ಕೆ ನಿರ್ಬಂಧ
  • ನಿಷೇಧಾಜ್ಞೆ ಪರಿಷ್ಕೃತ ಆದೇಶ

ಪುತ್ತೂರು: ಕೊರೋನಾ ವೈರಸ್ ಹರಡುವಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದ್ದು ಮಾ.31ರ ತನಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು, ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಸಿಂಧೂ ಬಿ.ರೂಪೇಶ್ ಅವರು ಈಗಾಗಲೇ ಆದೇಶ ಹೊರಡಿಸಿದ್ದಾರೆ.

ಇದೀಗ ಪರಿಷ್ಕೃತ ಆದೇಶ ಹೊರಡಿಸಿದ್ದು, ಅವಶ್ಯಕ ಸೇವೆಗಳಾದ ಆಹಾರ, ಪಡಿತರ ಅಂಗಡಿ, ಹಾಲು, ತರಕಾರಿ, ದಿನಸಿ, ಮಾಂಸ, ಮೀನು, ಹಣ್ಣಿನ ಮಾರುಕಟ್ಟೆ ಮತ್ತು ಸಗಟು ಹಾಗೂ ಚಿಲ್ಲರೆ ವ್ಯಾಪಾರದ ಅಂಗಡಿಗಳನ್ನು ಮಾತ್ರ ಬೆಳಿಗ್ಗೆ ೬ ಗಂಟೆಯಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ಮಾತ್ರ ತೆರೆಯಲು ಅವಕಾಶವಿದೆ.ಓಲಾ, ಉಬೆರ್, ಟ್ಯಾಕ್ಸಿ,ಅಟೋ ರಿಕ್ಷಾ ಮತ್ತು ಬಾಡಿಗೆ ವಾಹನ ಸೇವೆಗಳನ್ನು ಪ್ರಯಾಣಿಕರ ಸೇವೆಗಳಿಗೆ ಬಳಸತಕ್ಕದ್ದಲ್ಲ. ಕೇವಲ ತುರ್ತು ಪರಿಸ್ಥಿತಿ ಹಾಗೂ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಮಾತ್ರ ಬಳಸಲು ಅವಕಾಶ ನೀಡಲಾಗಿದೆ.ಅವಶ್ಯಕ ಸೇವೆಗಳು ಮತ್ತು ವಸ್ತುಗಳು, ಆಹಾರ, ವೈದ್ಯಕೀಯ ಉಪಕರಣಗಳು, ಔಷಧ, ಇಂಧನ ಹಾಗೂ ಕೃಷಿ ಉತ್ಪನ್ನಗಳ ಕಾರ್ಖಾನೆಗಳನ್ನು ಹೊರತುಪಡಿಸಿ ಉಳಿದ ಕೈಗಾರಿಕೆಗಳು,ಕಾರ್ಖಾನೆಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಬೇಕು.ಉಳಿದಂತೆ ಮಾ.22ರಂದು ಹೊರಡಿಸಿರುವ ಆದೇಶದಲ್ಲಿ ಯಾವುದೇ ಮಾರ್ಪಾಡು ಇರುವುದಿಲ್ಲ.ಮಾ.31ರ ಮಧ್ಯರಾತ್ರಿ 12 ಗಂಟೆ ತನಕ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.