Breaking News

ವೆನ್ ಲಾಕ್ ಬಗ್ಗೆ ಅಪಪ್ರಚಾರ : ಸಂಸದ ನಳಿನ್ ಕುಮಾರ್ ಕಟೀಲ್ ವೆನಲಾಕ್ ಆಸ್ಪತ್ರೆಗೆ ಭೇಟಿ – ಗೊಂದಲಕ್ಕೆ ತೆರೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಆತಂಕದ ನಡುವೆಯೂ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಂಗಳೂರಿನ ಜಿಲ್ಲಾ ಸರಕಾರಿ ಆಸ್ಪತ್ರೆ ವೆನ್ ಲಾಕ್ ‌ ಬಗ್ಗೆ ಅಪಪ್ರಚಾರ ನಡೆಸಿರುವ ಘಟನೆ ಮಾ.23ರಂದು ನಡೆದಿತ್ತು. ಈ ಸಂದರ್ಭದಲ್ಲಿ ಅಧಿವೇಶನದ ನಿಮಿತ್ತ ದೆಹಲಿಯಲ್ಲಿ ಇದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ವೆನ್ ಲಾಕ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರನ್ನು ಸರಿಯಾಗಿ ನೋಡಿಕೊಳ್ಳಲಾಗುತ್ತಿಲ್ಲ ಎನ್ನುವ ಊಹಾಪೋಹದ ಬಗ್ಗೆ ಗೊಂದಲ ಪಡುತ್ತಿರುವುದನ್ನು ಅರಿತುಕೊಂಡು ತಕ್ಷಣ ದೆಹಲಿಯಿಂದ ಬೆಂಗಳೂರಿಗೆ ಬಂದು ಮಂಗಳೂರಿಗೆ ಆಗಮಿಸಿದರು.

ವೆನಲಾಕ್ ಆಸ್ಪತ್ರೆಗೆ ತೆರಳಿದ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ವಿವಿಧ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು. ಸಂಸದರಿಗೆ ಸೂಕ್ತ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಕರೋನಾ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದರು. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕರೋನಾ ಪಾಸಿಟಿವ್ ಪತ್ತೆಯಾಗಿದ್ದು ಮತ್ತು ಇನ್ನೊಬ್ಬ ಕೊರೊನಾ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ.

ಸುಮಾರು 200ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು. ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರ ಭೇಟಿಯಿಂದ ಜನರಲ್ಲಿ ಇದ್ದ ಗೊಂದಲ ನಿವಾರಣೆಯಾಗಿದೆ. ಜನರು ಊಹಾಪೋಹಗಳನ್ನು ನಂಬದಂತೆ, ಜಿಲ್ಲಾಡಳಿತ, ರಾಜ್ಯ, ರಾಷ್ಟ್ರ ಸಂಪೂರ್ಣವಾಗಿ ಜನರ ಆರೋಗ್ಯ ಕಾಳಜಿಗೆ ಕಟಿಬದ್ಧವಾಗಿದೆ ಎಂದು ನಳಿನ್ ಕುಮಾರ್ ಜನರಿಗೆ ತಿಳಿಸಿದ್ದಾರೆ. ಸಂಸದರ ವೆನಲಾಕ್ ಭೇಟಿಯಿಂದ ಜನರಲ್ಲಿ ಮೂಡಿದ್ದ ಗೊಂದಲಕ್ಕೆ ತೆರೆ ಬಿದ್ದಂತೆ ಆಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.