Breaking News

ಲಾಕ್‌ಡೌನ್: ಪುತ್ತೂರಿನಲ್ಲಿ ಪೊಲೀಸ್ ಕಟ್ಟೆಚ್ಚರ! ವಿವಿಧ ಕಡೆಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ತಪಾಸಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮಾ.31ರ ವರೆಗೆ ರಾಜ್ಯಾದ್ಯಂತ ಲಾಕ್‌ಡೌನ್ ವಿಸ್ತರಿಸಲಾಗಿದ್ದು ಜನರ ಹಾಗೂ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಲಾಗಿದೆ.

ಮಾ.23ರಂದು ಪುತ್ತೂರಿನಲ್ಲೂ ಲಾಕ್‌ಡೌನ್ ಆದೇಶವನ್ನು ಪೊಲೀಸರು ಕಟ್ಟುನಿಟ್ಟಾಗಿ ಪಾಲಿಸಿದ್ದು ಪ್ರಮುಖ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನಗಳ ಓಡಾಟಕ್ಕೆ ನಿರ್ಬಂಧ ವಿಧಿಸಿದ್ದಾರೆ. ದರ್ಬೆ ಸರ್ಕಲ್, ಬೊಳ್ವಾರ್, ದರ್ಬೆ ಬೈಪಾಸ್ ರಸ್ತೆ, ಕಬಕ ಜಂಕ್ಷನ್, ಹಾರಾಡಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಿರುವ ಪೊಲೀಸರು ವಾಹನಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದಾರೆ. ತುರ್ತು ವಾಹನಗಳಿಗೆ ಮಾತ್ರ ಅವಕಾಶ ನೀಡುತ್ತಿದ್ದು ಅನಗತ್ಯವಾಗಿ ಯಾವುದೇ ವಾಹನಗಳಿಗೆ ಸಂಚರಿಸಲು ಅವಕಾಶ ಕೊಡದೇ ಹಿಂದಕ್ಕೆ ಕಳುಹಿಸುತ್ತಿದ್ದಾರೆ. ಒಟ್ಟಾರೆಯಾಗಿ ಪುತ್ತೂರು ಪೇಟೆ ಪರಿಸರದಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟು ಕಾರ್ಯ ನಿರ್ವಹಿಸುತ್ತಿದ್ದು ಕೊರೋನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.