ದ. ಕ ಜಿಲ್ಲೆ ಜನತೆಗೆ ಭರವಸೆ ನೀಡಿದ ಸಂಸದರು: ಮಾ.26ರಿಂದ ಮನೆಗೆ ಬಾಗಿಲಿಗೆ ಅಗತ್ಯ ಸಾಮಾಗ್ರಿ ಪೂರೈಕೆಗೆ ಕ್ರಮ

Puttur_Advt_NewsUnder_1
Puttur_Advt_NewsUnder_1

ಮಂಗಳೂರು:  ಸಾರ್ವಜನಿಕರು ಅಗತ್ಯ ವಸ್ತುಗಳಿಗೆ ಗುಂಪು ಗುಂಪುಗಳಾಗಿ ಮಾರುಕಟ್ಟೆಗಳಿಗೆ ಮುಗಿಬೀಳುತ್ತಿರುವ ಬಗ್ಗೆ ತಿಳಿದುಬಂದಿದೆ. ಇಂದು ಅಗತ್ಯ ವಸ್ತು ಖರೀದಿಗೆ ಸಮಯ ಕೊಟ್ಟಿದ್ದಾರೆ. ಆದರೆ ನಾಳೆಯಿಂದ ನಗರದಲ್ಲಿ ಇದಕ್ಕೂ ಅವಕಾಶವಿಲ್ಲ. ಯಾವುದೇ ಕಾರಣಕ್ಕೂ ಜನ ಹೊರಗಡಿಯಿಡುವಂತಿಲ್ಲ. ಕೊರೊನಾ ವೈರಸ್ ನಿಯಂತ್ರಣಕ್ಕೆ ಸಾಧ್ಯವಾದಷ್ಟು ಕಟ್ಟು ನಿಟ್ಟಿನ ಕ್ರಮ ಅನಿವಾರ್ಯ ಹೀಗಾಗಿ ನಾಳೆಯಿಂದ ಜನರಿಗೆ ಬೇಕಾದ ಎಲ್ಲಾ ಸವಲತ್ತುಗಳನ್ನು ನಾವೇ ಮನೆಗೆ ತಲುಪಿಸುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಕಡಕ್ ಸೂಚನೆ ನೀಡಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಬಹುದು, ಆದರೆ ಹಲವೆಡೆ ಮಾರ್ಕೆಟ್ , ಅಗತ್ಯ ವಸ್ತುಗಳ ಖರೀದಿಗೆ ಜನ ಒಮ್ಮೆಲೆ ಮುಗಿಬೀಳುತ್ತಿದ್ದಾರೆ. ವರ್ತಕರು ಗ್ರಾಹಕರು ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದೆ ವ್ಯಾಪಾರ ವಹಿವಾಟು ಮಾಡುವ ಬಗ್ಗೆ ತಿಳಿದುಬಂದಿದ್ದು ಹೀಗಾಗಿ ಮಾ.26ರಂದು ಎಲ್ಲವನ್ನು ಬಂದ್ ಮಾಡಲಾಗುವುದು. ಈ ಬಗ್ಗೆ ಜಿಲ್ಲೆಯ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ಮಾಡುತ್ತಿದ್ದೇವೆ.

ಜನರಿಗೆ ಬೇಕಾದ ಎಲ್ಲಾ ಸವಲತ್ತುಗಳನ್ನು ನಾವೇ ಮನೆಗೆ ತಲುಪಿಸುತ್ತೇವೆ. ಇದಕ್ಕಾಗಿ ಶೀಘ್ರವೇ ವ್ಯವಸ್ಥೆ ಮಾಡಲಾಗುವು. ಸರ್ಕಾರದ ಕಡೆಯಿಂದ ಪ್ರತಿ ಮನೆಗೆ ಹೇಗೆ ತಲುಪಿಸೋದು, ಅಪಾರ್ಟ್ ಮೆಂಟ್ ಗಳಿಗೆ ಹೇಗೆ ತಲುಪಿಸೋದು ಎನ್ನುವ ಬಗ್ಗೆ ಈಗಾಗಲೇ ಮಾತುಕತೆ ನಡೆಯುತ್ತಿದೆ ಎಂದು ಸ್ಪಷಪಡಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.